ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, June 12, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ 6 ಜನರಿಗೆ ಬ್ಲಾಕ್ ಫಂಗಸ್ ಪತ್ತೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಬಳ್ಳಾರಿ:

ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಬ್ಲ್ಯಾಕ್ ಫಂಗಸ್​ ಪ್ರಕರಣಗಳು ಪತ್ತೆಯಾಗುತ್ತಿದ್ದು, ಗಣಿನಾಡು ಬಳ್ಳಾರಿ- ವಿಜಯನಗರ ಜಿಲ್ಲೆಯಲ್ಲಿ 6 ಜನರಲ್ಲಿ ಪತ್ತೆಯಗಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ.
ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಟ್ಟು 6 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ಬಳ್ಳಾರಿ ಜಿಲ್ಲೆಯ ನಾನಾ ಕಡೆ 5 ಜನರಿಗೆ ಹಾಗೂ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ನಿಲಗುಂದದಲ್ಲಿ ಒಬ್ಬರಿಗೆ ಈ ಹೊಸ ಮಾರಕ ಸೊಂಕು ಕಂಡು ಬಂದಿದೆ. ಬಳ್ಳಾರಿ ನಗರದ ವಿಮ್ಸ್ ಆಸ್ಪತ್ರೆಯಲ್ಲಿ ಐದು ಜನರು ಚಿಕಿತ್ಸೆ ಪಡೆಯುತ್ತಿದ್ದು, ವಿಜಯನಗರ ಜಿಲ್ಲೆಯಲ್ಲಿ ಪತ್ತೆಯಾದ ವ್ಯಕ್ತಿಯೊಬ್ಬರನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಈ ಮಾರಕ ಹೊಸ ಖಾಯಿಲೆಗೆ ಒಳಗಾದ ಹರಪ್ಪನಹಳ್ಳಿಯ ವ್ಯಕ್ತಿ ಕೋವಿಡ್​ ಸೋಂಕಿನಿಂದ 12 ದಿನಗಳ ಕಾಲ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇನ್ನೇನು ಗುಣಮುಖನಾಗಿ ಡಿಸ್ಚಾರ್ಜ್ ಆಗಬೇಕೆ ಎನ್ನುವಷ್ಟರಲ್ಲಿ, ಕಣ್ಣು ಉಬ್ಬು, ತಲೆನೋವು ಕಂಡು ಬಂದಿದೆ. ಪರೀಕ್ಷಿಸಿದಾಗ ಬ್ಲಾಕ್ ಫಂಗಸ್ ಮೆತ್ತಿಕೊಂಡಿರುವುದು ಗೊತ್ತಾಗಿದೆ. ಕೂಡಲೇ ಅವರನ್ನು‌ ಹುಬ್ಬಳ್ಳಿಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ವೈದ್ಯರು ದೃಢ ಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss