ರಸ್ತೆ ಅಪಘಾತ: 6 ಮಂದಿ ಭಾರತೀಯ ಯಾತ್ರಾರ್ಥಿಗಳು ಸೇರಿ 7 ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಭಾರತೀಯರು ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ದುರಂತ ಘಟನೆ
ನೇಪಾಳದ ದಕ್ಷಿಣ ಬಯಲು ಪ್ರದೇಶದ ಬಾರಾ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಠ್ಮಂಡುವಿನಿಂದ ಜನಕ್‌ಪುರಕ್ಕೆ ತೆರಳುತ್ತಿತ್ತು. ಬೆಳಗ್ಗೆ ಸುಮಾರು 2 ಗಂಟೆಗೆ ಬಸ್ ಪ್ರಪಾಪತಕ್ಕೆ ಬಿದ್ದ ಪರಿಣಾಮ ಅವಘಡ ಸಂಭವಿಸಿದೆ.

ಬಸ್‌ನಲ್ಲಿ ಒಟ್ಟು 27 ಮಂದಿ ಪ್ರಯಾಣಿಕರಿದ್ದರು. ಅವರಲ್ಲಿ ಆರು ಭಾರತೀಯರು ಸೇರಿ 7 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನುಳಿದ 19 ಮಂದಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!