ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಆರು ಮಂದಿಗೆ ಗಾಯಗಳಾಗಿರುವ ಘಟನೆ ಬಿಹಾರದ ಸೀತಾಮರ್ಹಿಯಲ್ಲಿ ನಡೆದಿದೆ.
ಮನೆಯೊಂದರಲ್ಲಿ ಟೀ ಮಾಡುವ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು, ಗಾಯಾಳುಗಳನ್ನು ಸೀತಾಮರ್ಹಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗ್ಯಾಸ್ ಸಿಲಿಂಡರ್ ನಿಂದ ಅನೀಲ ಸೋರಿಕೆಯಾಗಿದ್ದು, ಇಡೀ ಮನೆಯನ್ನು ಆವರಿಸಿದೆ. ಈ ವೇಳೆ ಚಹಾ ತಯಾರಿಸಲು ಮುಂದಾದಾಗ, ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಕುಟುಂಬಸ್ಥರು ಹೇಳಿಕೆ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.