ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೀಪ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆರು ಮಂದಿ ಮೃತಪಟ್ಟಿದ್ದು, ಹನ್ನೊಂದು ಜನರಿಗೆ ಗಾಯಗಳಾಗಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ.
ಮಂಗಳವಾರದಂದು ದೌಸಾದ ಮಂದಾವರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಂಪು ಪಾನೀಯ ಸಾಗಿಸುತ್ತಿದ್ದ ಟ್ರಕ್ವೊಂದು ಪ್ರಯಾಣಿಕರಿದ್ದ ಜೀಪ್ಗೆ ಡಿಕ್ಕಿ ಹೊಡೆದು ನಂತರ ಜೀಪಿನ ಮೇಲೆ ಪಲ್ಟಿಯಾಗಿದೆ. ಇದರ ಪರಿಣಾಮ ಜೀಪ್ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಈವರೆಗೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದ ಕೂಡಲೇ ಮಂದಾವರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.