ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ದುರಂತ; 6 ಜನರ ಸಾವು, 12ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಆಂಧ್ರಪ್ರದೇಶದ ಏಲೂರು ರಾಸಾಯನಿಕ ಕಾರ್ಖಾನೆಯೊಂದರಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿಅವಘಡದಲ್ಲಿ ಆರು ಮಂದಿ ಮೃತಪಟ್ಟು 12 ಜನರು ಗಾಯಗೊಂಡಿದ್ದಾರೆ.
ಮಾಸುನೂರು ವಲಯದ ಅಕ್ಕಿರೆಡ್ಡಿಗುಡೆಂನಲ್ಲಿರುವ ಪೋರಸ್‌ ರಾಸಾಯನಿಕ ಕಾರ್ಖಾನೆಯಲ್ಲಿ ರಾನಾಯನಿಕಗಳು ಸೋರಿಕೆಯಾಗಿ ಅವಘಡ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾರ್ಖಾನೆಯಿಂದ ಹೊರಬರಲಾರದೆ ಐವರು ಸ್ಥಳದಲ್ಲೇ ಸಜೀವ ದಹನವಾದರೆ, ಮತ್ತೊರ್ವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಗಾತಯಾಳುಗಳನ್ನು ನೂಜಿವೀಡು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕಾರ್ಖಾನೆಯಲ್ಲಿ ದುರ್ಘಟನೆ ವೇಲೆ 150 ಮಂದಿ ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್ ಉಳಿದರವರು ಪಾರಾಗಿದ್ದಾರೆ. ದುರ್ಘಟನೆಯಲ್ಲಿ ಮೃತರಾದವರ ಕುಟುಂಬಸ್ಥರಿಗೆ ಆಂಧ್ರ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತಲಾ ರೂ.25 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!