Tuesday, June 28, 2022

Latest Posts

ಒಂದೇ ಕುಟುಂಬದ ಆರು ಮಂದಿ ಕೊಲೆ: ಕಾರಣ ಏನು?

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಒಂದೇ ಕುಟುಂಬದ ಆರು ಮಂದಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಜುತ್ತಾಡದಲ್ಲಿ ವಾಸವಿದ್ದ ಕುಟುಂಬದವರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.
ಮನೆಗೆ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಥಳಿಸಿ ಕೊಲೆ ಮಾಡಿದ್ದಾರೆ. ಉಷಾರಾಣಿ,ರಮಾದೇವಿ,ಅರುಣ,ರಮಣ ಹಾಗೂ ಮಕ್ಕಳಾದ ಉದಯ,ಊರ್ವಿ ಮೃತರು. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಆರೋಪಿ ಅಪ್ಪಲರಾಜುನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss