ಕರ್ನಾಟಕದ 6 ನಕ್ಸಲರು ಇಂದು ಶರಣಾಗತಿ: ಸರ್ಕಾರದ ಪ್ಯಾಕೇಜ್ ಹೇಗಿದೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಸುಮಾರು ಎರಡು ದಶಕಗಳ ಕಾಲ ಬಂದೂಕು ಹಿಡಿದು ಹೋರಾಟ ನಡೆಸಿದ್ದ 6 ಮಂದಿ ನಕ್ಸಲರು ಬುಧವಾರ ಶರಣಾಗತಿಗೆ ಸಮ್ಮತಿಸಿದ್ದಾರೆ. ಹೀಗಾಗಿ ಹಲವು ದಶಕಗಳ ಕಾಲ ರಾಜ್ಯ ಸರ್ಕಾರಕ್ಕೆ ತಲೆನೋವಾಗಿದ್ದ ನಕ್ಸಲ್ ಚಳವಳಿ ಬಹುತೇಕ ಅಂತ್ಯ ಕಾಣುವ ಕಾಲ ಸನ್ನಿಹಿತವಾಗಿದೆ.

ಮುಂಡಗಾರು ಲತಾ, ಸುಂದರಿ ಕುಟ್ಟೂರು, ವನಜಾಕ್ಷಿ ಬಾಳೆಹೊಳೆ, ಮಾರಪ್ಪ ಅರೋಲಿ, ಕೆ. ವಸಂತ, ಟಿ. ಎನ್. ಜೀಶ್ ಅಲಿಯಾಸ್ ಜಯಣ್ಣ ಬುಧವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಮುಂದೆ ಶರಣಾಗಲಿದ್ದಾರೆ. ಸರ್ಕಾರ- ನಕ್ಸಲರ ಮಧ್ಯ ಮಧ್ಯಸ್ಥಿಕೆ ವಹಿಸಿರುವ ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡ ಕೆ.ಎಲ್‌. ಅಶೋಕ್ ಶರಣಾಗತಿ ವಿಷಯ ಖಚಿತಪಡಿಸಿದ್ದಾರೆ.

ಬೆಳಗ್ಗೆ 10 ಗಂಟೆ ವೇಳೆಗೆ 6 ಮಂದಿ ನಕ್ಸಲೀಯರು ಚಿಕ್ಕಮಗಳೂರು ನಗರಕ್ಕೆ ಆಗಮಿಸಲಿದ್ದಾರೆ. ಅವರಿಗೆ ಪ್ರವಾಸಿ ಮಂದಿರದ ಬಳಿ ಶಾಂತಿಗಾಗಿ ನಾಗರಿಕ ವೇದಿಕೆ ಹಾಗೂ ಪ್ರಗತಿಪರ ಸಂಘಟನೆಗಳ ನಾಯಕರು ಸ್ವಾಗತ ಕೋರಲಿದ್ದಾರೆ. ನಕ್ಸಲರನ್ನು ಅವರ ಸಂಬಂಧಿಕರು ಭೇಟಿ ಮಾಡಲಿದ್ದಾರೆ. ಬಳಿಕ ನಕ್ಸಲರನ್ನು ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ಎದುರು ಹಾಜರುಪಡಿಸಲಿದ್ದಾರೆ. ಪೊಲೀಸರು ನಕ್ಸಲರನ್ನು ವಶಕ್ಕೆ ಪಡೆದು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆಂದು ಮೂಲಗಳು ತಿಳಿಸಿವೆ.

ಇವರಿಗೆ ಸರ್ಕಾರ ಎಷ್ಟು ಹಣ ನೀಡಲಿದೆ? ಪ್ಯಾಕೇಜ್‌ ಹೇಗಿದೆ? ಇಲ್ಲಿದೆ ಮಾಹಿತಿ..
ಎ ಕೆಟಗರಿ:
ನಕ್ಸಲರು ರಾಜ್ಯದವರೇ ಆಗಿ, ಆಕ್ಟೀವ್ ಆಗಿದ್ದು ಕೇಸ್ ಇದ್ದರೆ ಅಂತಹವರಿಗೆ ಎ ಕೆಟಗರಿ ಅಡಿಯಲ್ಲಿ 7.50 ಲಕ್ಷ ರೂ. ಹಣವನ್ನು ನೀಡಲಾಗುತ್ತದೆ.
ಬಿ ಕೆಟಗರಿ:
ನಕ್ಸಲರು ಹೊರರಾಜ್ಯದವರಾಗಿ, ಶಸ್ತ್ರಸಜ್ಜಿತ ನಕ್ಸಲ್ ಗುಂಪಿನ ಸದಸ್ಯನಾಗಿದ್ದು, ಆತನ ಮೇಲೆ ಒಂದಕ್ಕಿಂತ ಹೆಚ್ಚು ಪ್ರಕರಣ ಇದ್ದರೆ 4 ಲಕ್ಷ ರೂ. ಹಣ ನೀಡಲಾಗುತ್ತದೆ.
ಸಿ ಕೆಟಗರಿ:
ಎಡಪಂಥೀಯ ಭಯೋತ್ಪಾದನಾ ಚಟುವಟಿಕೆ ಬೆಂಬಲಿಸುವ ನಕ್ಸಲರ ಸಂಪರ್ಕ ಹೊಂದಿ, ಪ್ರಕರಣಗಳು ಇದ್ದರೆ ಅಂತಹವರಿಗೆ 2 ಲಕ್ಷ ರೂ. ಹಣವನ್ನು ಸರ್ಕಾರ ನೀಡುತ್ತದೆ. ನಕ್ಸಲರು ಒಟ್ಟು ಮೂರು ಭಾಗಗಳಾಗಿ ಹಣ ಪಡೆಯುತ್ತಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!