spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪ್ರಸಕ್ತ ಸಾಲಿನಿಂದ ITI ಗೆ 6 ಹೊಸ ಕೋರ್ಸ್ ಸೇರ್ಪಡೆ: ಸಚಿವ ಡಾ.ಸಿ ಎನ್‌ ಅಶ್ವಸ್ಥ್‌ ನಾರಾಯಣ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದ 150 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಉನ್ನತೀಕರಿಸುವ ಕಾರ್ಯಕ್ರಮದಡಿ 6 ಹೊಸ ಕೋರ್ಸ್ ಗಳಿಗೆ ರಾಜ್ಯ ವೃತ್ತಿಶಿಕ್ಷಣ ಪರಿಷತ್ (ಎಸ್.ವಿ.ಸಿ.ಟಿ.) ಅನುಮೋದನೆ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್‌ ಅಶ್ವಸ್ಥ್‌ ನಾರಾಯಣ ತಿಳಿಸಿದ್ದಾರೆ.
ಸಚಿವರ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಸಭೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಎಲ್ಲಾ 150 ಐ.ಟಿ.ಐ.ಗಳಿಗೆ ಅನ್ವಯವಾಗಲಿದೆ.
ಈ ಕುರಿತು ಮಾಹಿತಿ ನೀಡಿದ ಸಚಿವರು, ಪ್ರಸಕ್ತ ಸಾಲಿನಿಂದಲೇ ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಬ್ಯಾಟರಿ ಎಲೆಕ್ಟ್ರಿಕ್ ವೆಹಿಕಲ್ (2 ವರ್ಷ), ಬೇಸಿಕ್ಸ್ ಆಫ್ ಡಿಜೈನ್ ಅಂಡ್ ವರ್ಚ್ಯುಯಲ್ ವೆರಿಫಿಕೇಷನ್ (2 ವರ್ಷ), ಅಡ್ವಾನ್ಸ್ಡ್ ಮ್ಯಾನಫ್ಯಾಕ್ಚರಿಂಗ್ (1 ವರ್ಷ), ಆರ್ಟಿಸಾನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ಸ್ (1 ವರ್ಷ), ಇಂಡಸ್ಟ್ರಿಯಲ್ ರೊಬೊಟಿಕ್ಸ್ ಅಂಡ್ ಡಿಜಿಟಲ್ ಮ್ಯಾನಫ್ಯಾಕ್ಚರ್ (1 ವರ್ಷ), ಮ್ಯಾನಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಆಟೊಮೇಷನ್ (1 ವರ್ಷ), ಈ 6 ಸಂಯೋಜನೆಗಳು ಐ.ಟಿ.ಐ.ಗೆ ಸೇರ್ಪಡೆಯಾಗುತ್ತವೆ ಎಂದು ತಿಳಿಸಿದ್ದಾರೆ.
ಇದೇ ವೇಳೆ 3 ತಿಂಗಳ ಅವಧಿಯ 23 ಅಲ್ಪಾವಧಿ ಸರ್ಟಿಫೈಯ್ಡ್ ಕೋರ್ಸ್ ಗಳಿಗೆ ಕೂಡ ಎಸ್.ವಿ.ಸಿ.ಟಿ.ಯು ಅನುಮೋದನೆ ನೀಡಿದೆ ಎಂದು ಸಚಿವರು ಹೇಳಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss