May 10, 2026
Sunday, May 10, 2026
spot_img

ಬಿಡುಗಡೆಗೂ ಮುನ್ನ ‘ಜನ ನಾಯಗನ್’ ಲೀಕ್ ಮಾಡಿರೋ 6 ಮಂದಿ ಅಂದರ್: ಪೈರಸಿ ಮಾಡಿದ್ರೆ ಹುಷಾರ್ ಎಂದ ಚಿತ್ರ ತಂಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಲಿವುಡ್ ಸ್ಟಾರ್ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ಬಿಡುಗಡೆಗೂ ಮುನ್ನವೇ ಪೈರಸಿ ಸಮಸ್ಯೆಗೆ ಸಿಲುಕಿದ್ದು, ಚಿತ್ರದಿಂದ ಸೋರಿಕೆಯಾದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರು ಮಂದಿಯನ್ನು ಬಂಧಿಸಿದ್ದಾರೆ.

ಚಿತ್ರದ ನಿರ್ಮಾಣ ಸಂಸ್ಥೆ KVN ಪ್ರೊಡಕ್ಷನ್ಸ್ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಲೀಕ್ ಆದ ದೃಶ್ಯಗಳನ್ನು ಡೌನ್‌ಲೋಡ್ ಮಾಡುವುದು, ಫಾರ್ವರ್ಡ್ ಮಾಡುವುದು ಅಥವಾ ಯಾವುದೇ ಡಿಜಿಟಲ್ ವೇದಿಕೆಯಲ್ಲಿ ಹಂಚಿಕೊಳ್ಳುವುದು ಕಾನೂನುಬಾಹಿರ ಎಂದು ಸ್ಪಷ್ಟ ಎಚ್ಚರಿಕೆ ನೀಡಿದೆ. ಇಂತಹ ಕೃತ್ಯದಲ್ಲಿ ತೊಡಗಿರುವವರನ್ನು ಡಿಜಿಟಲ್ ಟ್ರೇಸ್ ಮೂಲಕ ಪತ್ತೆಹಚ್ಚಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ:

ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ನಿರ್ದೇಶಕ ಎಚ್. ವಿನೋದ್ ರೂಪಿಸಿದ್ದು, ಸಂಗೀತವನ್ನು ಅನಿರುದ್ಧ್ ರವಿಚಂದರ್ ನೀಡಿದ್ದಾರೆ. ಥಿಯೇಟರ್, ಸ್ಯಾಟಲೈಟ್ ಹಾಗೂ OTT ಹಕ್ಕುಗಳ ದೃಷ್ಟಿಯಿಂದ ಈ ಚಿತ್ರಕ್ಕೆ ಭಾರಿ ವಾಣಿಜ್ಯ ಮೌಲ್ಯವಿದೆ.

ವಾಟ್ಸಾಪ್, ಟೆಲಿಗ್ರಾಮ್, ಎಕ್ಸ್ ಮತ್ತು ಫೇಸ್‌ಬುಕ್ ಸೇರಿದಂತೆ ಎಲ್ಲಾ ಡಿಜಿಟಲ್ ವೇದಿಕೆಗಳ ಮೇಲೆ ನಿಗಾ ಇಡಲಾಗಿದೆ. ಈ ನಡುವೆ ದಕ್ಷಿಣ ಭಾರತದ ಹಲವು ತಾರೆಯರು ವಿಜಯ್ ಬೆಂಬಲಕ್ಕೆ ನಿಂತು ಪೈರಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !