ರಾಜಸ್ಥಾನದಲ್ಲಿ ಭೀಕರ ಅಪಘಾತ: 6 ಜನರ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ದೇವಾಲಯಕ್ಕೆ ತೆರಳಿದ್ದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರೈಲರ್ ಮತ್ತು ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಸುಮೇರ್‌ಪುರ ಪೊಲೀಸ್ ಠಾಣೆ ಪ್ರಭಾರಿ ರಾಮೇಶ್ವರ ಭಾಟಿ ತಿಳಿಸಿದ್ದಾರೆ. ಯಾತ್ರಾರ್ಥಿಗಳು ಜೈಸಲ್ಮೇರ್‌ನ ರಾಮದೇವ್ರಾದಿಂದ ಹಿಂದಿರುಗುತ್ತಿದ್ದರು. ಅಲ್ಲಿ ಜಾನಪದ ದೇವತೆ ಬಾಬಾ ರಾಮ್‌ದೇವ್ ದೇವಾಲಯವಿದೆ. ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್‌ ಮೂಲಕ ಶೋಕ ವ್ಯಕ್ತಪಡಿಸಿದ್ದಾರೆ. “ರಾಜಸ್ಥಾನದ ಪಾಲಿಯಲ್ಲಿ ಸಂಭವಿಸಿದ ಅಪಘಾತವು ದುಃಖಕರವಾಗಿದೆ. ಮೃತರ ಕುಟುಂಬಗಳಿಗೆ ಈ ಅಘಾತದಿಂದ ಶೀಘ್ರವಾಗಿ ಚೇತರಿಸಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ.  ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಶೋಕ ಸಂದೇಶ ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!