BREAKING | ನಿರ್ಮಾಣ ಹಂತದಲ್ಲಿದ್ದ 6 ಅಂತಸ್ತಿನ ಕಟ್ಟಡ ಕುಸಿತ, ಕಾರ್ಮಿಕರು ಸಿಲುಕಿರುವ ಶಂಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ತೆಲಂಗಾಣದ ಭದ್ರಾದ್ರಿ ಕೊಥಗುಡೆಂ ಜಿಲ್ಲೆಯ ಭದ್ರಾಚಲಂನಲ್ಲಿ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ ಇಬ್ಬರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಭದ್ರಾಚಲಂ ಎಎಸ್ಪಿ ವಿಕ್ರಾಂತ್ ಕುಮಾರ್ ಸಿಂಗ್, ಮಧ್ಯಾಹ್ನ 2.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ.

ಅಧಿಕಾರಿಗಳು ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಕಟ್ಟಡದ ಮೇಲಿನ ಮಹಡಿಗಳನ್ನು ಅನುಮತಿಯಿಲ್ಲದೆ ನಿರ್ಮಿಸಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!