ನಮಗೂ ತಿಂಗಳಿಗೆ 6 ಸಾವಿರ ರೂ. ಪಿಂಚಣಿ ನೀಡಿ: ಸರಕಾರದ ಮುಂದೆ ಬೇಡಿಕೆ ಇಟ್ಟ ಬೋಳು ತಲೆ ಪುರುಷರ ಸಂಘ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರತಿಯೊಂದು ಸವಲತ್ತುಗಳನ್ನು ಪಡೆಯಲು ವಿವಿಧ ಕೆಲಸ ಜಾತಿ ಹೀಗೆ ಅನೇಕ ರೀತಿಯ ಸಂಘಗಳಿವೆ. ಇವುಗಳು ತಮ್ಮ ಜೀವನಕ್ಕೆ ಬೇಕಾಗಿರುವ ಅವಶ್ಯಕತೆಗಾಗಿ ಸರಕಾರದ ಮುಂದೆ ಬೇಡಿಕೆ ಇಡುತ್ತಾರೆ.

ಅದೇ ರೀತಿ ಬೋಳು ತಲೆ ಪುರುಷರ ಸಂಘ ಕೂಡ ತಮಗೆ ತಿಂಗಳಿಗೆ 6 ಸಾವಿರ ರೂ. ಪಿಂಚಣಿ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದೆ.

ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ತಂಗಲ್ಲಪಲ್ಲಿ ಗ್ರಾಮದ ಬೋಳು ತಲೆಯ ಪುರುಷರ ಸಂಘವು ತಿಂಗಳಿಗೆ 6000 ರೂ. ಪಿಂಚಣಿ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದು, ಬೋಳು ತಲೆಯ ಪುರುಷರಿಗೆ ಸಂಕ್ರಾಂತಿ ಉಡುಗೊರೆಯಾಗಿ ಪಿಂಚಣಿಯನ್ನು ಘೋಷಿಸಬೇಕು ಎಂದು ಮನವಿ ಮಾಡಿದೆ.

ವೃದ್ಧರು, ವಿಧವೆಯರು, ದೈಹಿಕ ವಿಕಲಚೇತನರು ಮತ್ತು ಇತರರಿಗೆ ಸರ್ಕಾರ ಪಿಂಚಣಿ ನೀಡುತ್ತಿದೆ. ಅದರಂತೆ ನಮ್ಮನ್ನೂ ಪರಿಗಣಿಸಿ ನಮ್ಮ ಈ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಬೋಳು ತಲೆ ಪುರುಷರ ಸಂಘ ಆಗ್ರಹಿಸಿದೆ.

ನಾವು ತಲೆಯಲ್ಲಿ ಕೂದಲು ಇಲ್ಲದೆ ಸಾಕಷ್ಟು ಮುಜುಗರ ಅನುಭವಿಸುತ್ತಿರುವುದಲ್ಲದೆ, ಕೆಲವರು ನಮ್ಮನ್ನು ನೋಡಿ ಅಪಹಾಸ್ಯ ಮಾಡುತ್ತಿರುವುದರಿಂದ ಸಾಕಷ್ಟು ಕುಗ್ಗಿ ಮಾನಸಿಕವಾಗಿ ಹಿಂಸೆ ಅನುಭವಿಸುತ್ತಿದ್ದೇವೆ. ಹೀಗಾಗಿ ಸರ್ಕಾರ ನಮ್ಮ ಬಗ್ಗೆ ವಿಶೇಷ ಗಮನಹರಿಸಬೇಕು ಎಂದು ಬೋಳು ತಲೆಯ ಪುರುಷರ ಸಂಘ ತೆಲಂಗಾಣ ಸರ್ಕಾರಕ್ಕ ಮನವಿ ಸಲ್ಲಿಸಿದೆ.

ಸಂಘದ ಸದಸ್ಯ 41 ವರ್ಷದ ಪಿ ಅಂಜಿ ಮಾತನಾಡಿ, ಜನರು ನಮ್ಮ ಮೇಲೆ ಮಾಡುವ ಕಾಮೆಂಟ್‌ಗಳು ನಮಗೆ ನೋವುಂಟುಮಾಡುತ್ತವೆ. ನಮ್ಮನ್ನು ನೋಡಿ ಅವರು ನಗುತ್ತಾರೆ. ಏಕೆಂದರೆ ನಮ್ಮ ತಲೆಯಲ್ಲಿ ಕೂದಲು ಕಡಿಮೆಯಾಗುತ್ತಿದೆ ಮತ್ತು ಇದು ನಮಗೆ ಮಾನಸಿಕ ಹಿಂಸೆಯನ್ನು ನೀಡುತ್ತಿದೆ. ನಾವು ಈಗಾಗಲೇ ನಮ್ಮ ಬೋಳುತನದ ಬಗ್ಗೆ ಚಿಂತಿತರಾಗಿರುವಾಗ ನಮ್ಮನ್ನು ಆಗಾಗ ಅಪಹಾಸ್ಯ ಮಾಡಲಾಗುತ್ತದೆ. ಇದು ನಮಗೆ ಮತ್ತೊಂದು ಕಳವಳಕಾರಿಯಾಗಿದೆ ಎಂದು ನೋವು ತೋಡಿಕೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!