6 ವರ್ಷದ ಬಾಲಕಿ ಮೇಲೆ ಸಾಕು ನಾಯಿ ದಾಳಿ: ಗಂಭೀರ ಗಾಯ, ಆಸ್ಪತ್ರಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಘಾತಕಾರಿ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ಗಾಜಿಯಾಬಾದ್‌ನ ಪ್ರದೇಶದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಾಯಿಯೊಂದು ದಾಳಿ ಮಾಡಿ ಕೈಗೆ ಕಚ್ಚಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ನಾಯಿಯ ಮಾಲೀಕರ ಸಮ್ಮುಖದಲ್ಲಿ ನಾಯಿ ಅಪ್ರಾಪ್ತ ಬಾಲಕಿಯ ಮೇಲೆ ದಾಳಿ ಮಾಡಿರುವುದು ವಿಡಿಯೋದಲ್ಲಿದೆ.

ಸೊಸೈಟಿ ಆವರಣದಲ್ಲಿ ಆಟವಾಡುತ್ತಿದ್ದ ವನ್ಯಾ ಚೌಹಾಣ್ ಎಂಬ ಬಾಲಕಿ ಮೇಲೆ ನಾಯಿಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ನಡೆದಿದೆ . ಜರ್ಮನ್ ಶೆಫರ್ಡ್ ನಾಯಿ ಬಾಲಕಿಯನ್ನು ಕಚ್ಚಲು ಯತ್ನಿಸಿದೆ ನಾಯಿಯ ಮಾಲೀಕರು ಆಕೆಯನ್ನು ಎಳೆಯಲು ಯತ್ನಿಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ನಾಯಿ ದಾಳಿಯಿಂದ ಬಾಲಕಿಯ ಕೈಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!