1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ: ರಾಜ್ಯ ಸರಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

2025-26ನೇ ಶೈಕ್ಷಣಿಕ ವರ್ಷದಿಂದ 1ನೇ ತರಗತಿಗೆ ಮಕ್ಕಳ ದಾಖಲಾತಿಯನ್ನು 6 ವರ್ಷ ನಿಗದಿ ಮಾಡಿ ರಾಜ್ಯ ಸರಕಾರ ಆದೇಶ ನೀಡಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿರುವ ತಿದ್ದುಪಡಿ ಆದೇಶದಂತೆ , ವಿದ್ಯಾರ್ಥಿ ಒಂದನೇ ತರಗತಿ ಸೇರಬೇಕಾದರೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು. 2025-26 ನೇ ಸಾಲಿನಿಂದ ನಿಯಮ ಅನ್ವಯವಾಗಲಿದೆ ಎಂದು ಸರ್ಕಾರ ಅಧಿಕೃತ ಆದೇಶದಲ್ಲಿ ತಿಳಿಸಿದೆ.

2025-26ನೇ ಸಾಲಿನಿಂದ ಅನ್ವಯವಾಗುವಂತೆ ಜೂನ್ 1 ಕ್ಕೆ 6 ವರ್ಷ ತುಂಬಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!