ಉದ್ಯಮಿಗೆ ಬರೋಬ್ಬರಿ 60 ಕೋಟಿ ರೂ. ವಂಚನೆ: ಶಿಲ್ಪಾ ಶೆಟ್ಟಿ-ರಾಜ್‌ ಕುಂದ್ರ ವಿರುದ್ಧ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಂಬೈ ಮೂಲದ ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಆರೋಪದಲ್ಲಿ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್‌ ಕುಂದ್ರಾ ವಿರುದ್ಧ ಆರೋಪ ಕೇಳಿಬಂದಿದೆ.

ಸೆಲೆಬ್ರಿಟಿ ದಂಪತಿಯ ಈಗ ನಿಷ್ಕ್ರಿಯವಾಗಿರುವ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ಗಾಗಿ ಸಾಲ ಮತ್ತು ಹೂಡಿಕೆ ಒಪ್ಪಂದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಉದ್ಯಮಿ ದೀಪಕ್ ಕೊಠಾರಿ ಅವರು 2015-2023 ರ ಸುಮಾರಿಗೆ ವ್ಯವಹಾರ ವಿಸ್ತರಣೆಗಾಗಿ ತಮಗೆ 60.48 ಕೋಟಿ ರೂ.ಗಳನ್ನು ನೀಡಿದ್ದೆ. ಆದರೆ, ಅದನ್ನು ವೈಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿಕೊಂಡಿದ್ದಾರೆ ಎಂದು ನಟಿ ಹಾಗೂ ಪತಿ ವಿರುದ್ಧ ಆರೋಪ ಮಾಡಿದ್ದಾರೆ.

ಆರ್ಯ ಕಂಪನಿಗೆ ವಾರ್ಷಿಕ ಶೇ.12 ರಷ್ಟು ಬಡ್ಡಿದರದಲ್ಲಿ 75 ಕೋಟಿ ರೂ. ಸಾಲ ಕೇಳಿದ್ದರು. ಆದರೆ, ಹೆಚ್ಚಿನ ತೆರಿಗೆಗಳನ್ನು ತಪ್ಪಿಸಲು ಆ ಮೊತ್ತವನ್ನು ಹೂಡಿಕೆ ಎಂದು ಪರಿಗಣಿಸುವಂತೆ ಸೂಚಿಸಿದ್ದರು ಎಂದು ಉದ್ಯಮಿ ಆರೋಪಿಸಿದ್ದಾರೆ. ಸಭೆ ನಡೆಸಿ, ಹಣವನ್ನು ಸಮಯಕ್ಕೆ ಹಿಂದಿರುಗಿಸುವ ಭರವಸೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.

ಕೊಠಾರಿ, 2015 ರ ಏಪ್ರಿಲ್‌ನಲ್ಲಿ ಮೊದಲ ಕಂತಿನ ಸುಮಾರು 31.95 ಕೋಟಿ ರೂ. ಕಳುಹಿಸಿದ್ದೆ. ಆದರೆ ತೆರಿಗೆ ಸಮಸ್ಯೆ ಹಾಗೆಯೇ ಉಳಿದು ಸೆಪ್ಟೆಂಬರ್‌ನಲ್ಲಿ ಎರಡನೇ ಒಪ್ಪಂದಕ್ಕೆ ಸಹಿ ಹಾಕಲಾಯಿತು. 2015 ಮಾರ್ಚ್‌ ಮತ್ತು 2016 ರ ಮಾರ್ಚ್‌ ನಡುವೆ ಅವರು 28.54 ಕೋಟಿ ರೂ. ವರ್ಗಾಯಿಸಿಕೊಂಡಿದ್ದರೆಂದು ಉದ್ಯಮಿ ತಿಳಿಸಿದ್ದಾರೆ.

60.48 ಕೋಟಿ ರೂ.ಗೂ ಹೆಚ್ಚು ಹಣವನ್ನು ವರ್ಗಾಯಿಸಿದ್ದಾರೆ. ಜೊತೆಗೆ 3.19 ಲಕ್ಷ ರೂ. ಸ್ಟಾಂಪ್ ಡ್ಯೂಟಿಯಾಗಿ ಪಾವತಿಸಿದ್ದಾರೆ. 2016ರ ಏಪ್ರಿಲ್‌ನಲ್ಲಿ ಶೆಟ್ಟಿ ಅವರು ವೈಯಕ್ತಿಕ ಗ್ಯಾರಂಟಿ ಕೂಡ ನೀಡಿದ್ದರು ಎಂದು ಕೊಠಾರಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!