ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಮೀಕ್ಷೆ ನಡೆಸಲು 60 ದಿನಗಳ ಕಾಲ ಡೆಟ್ ಲೈನ್ ಕೊಡಲಾಗಿದೆ. ಜಾತಿಗಣತಿಯೂ ಒಳಮೀಸಲಾತಿ ಗಣತಿಗೂ ಯಾವುದೇ ಸಂಬಂಧ ಇಲ್ಲ. ಇದು ಕೇವಲ ಎಸ್‌ಸಿ ಸಮುದಾಯಕ್ಕೆ ಮಾತ್ರ ಸೀಮಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಎಸ್ ಸಿ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಸಮಗ್ರ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ನಡೆಯಲಿದೆ. ಇಂದಿನಿಂದ ಮೇ 17ರವರೆಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಗಣತಿ ನಡೆಯಲಿದೆ ಎಂದು ತಿಳಿಸಿದರು. ಮೊದಲನೇ ಹಂತ ಇಂದಿನಿಂದಲೇ ಆರಂಭಗೊಳ್ಳಲಿದೆ. ಈ ಹಂತದಲ್ಲಿ ಮನೆ ಮನೆಗೆ ಹೋಗಿ ಸಮೀಕ್ಷೆ ನಡೆಸಲಾಗುತ್ತದೆ. ಎರಡನೇ ಹಂತ ಮೇ 5 ರಿಂದ ಶುರುವಾಗಲಿದೆ. ಇದಕ್ಕಾಗಿ ವಿಶೇಷ ಶಿಬಿರಗಳಲ್ಲಿ ಈ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದರು.
ಎಸ್‌ಸಿ ಒಳಮೀಸಲಾತಿ ಸಮೀಕ್ಷೆಗೆ ಸುಮಾರು 100 ಕೋಟಿ ಖರ್ಚು ಆಗಬಹುದು. ನಾಗಮೋಹನ್ ದಾಸ್ ಅವರು ಏನು ಶಿಫಾರಸು ಮಾಡುತ್ತಾರೆ ಅದರ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಇಂದಿನಿಂದ 17 ರವರೆಗೆ ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗುತ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರ್ತಾರೆ. ಮನೆ ಮನೆ ಭೇಟಿ ಕೊಡುವ ಜೊತೆಗೆ, ಮೊದಲ ಹಂತದಲ್ಲಿ 5-5-25 ರಿಂದ 17-5-2025 ವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.