ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ: ಒಂದು ದಿನ ಗಡುವು ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಅಳವಡಿಕೆಯ ಅಂತಿಮ ಗಡುವು ಇಂದು ಕೊನೆಗೊಂಡಿದ್ದು, ಇದೀಗ ಬಿಬಿಎಂಪಿ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಹಾಕಲು ಮತ್ತೆ ಒಂದು ದಿನ ಗಡುವು ವಿಸ್ತರಿಸಿದೆ.

ಈ ಕುರಿತು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದು, ಮಳಿಗೆಗಳಲ್ಲಿ ಕನ್ನಡ ನಾಮಫಲಕ ಹಾಕಲು ಮತ್ತೊಂದು ದಿನ ಅವಕಾಶ ನೀಡಲಾಗಿದೆ.ನಾಳೆ ಸಂಜೆಯೊಳಗೆ ಕನ್ನಡ ನಾಮಫಲಕ ಹಾಕದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕನ್ನಡ ನಾಮಫಲಕಗಳನ್ನು ಅಳವಡಿಸದಿದ್ದರೆ ಅಂಗಡಿ, ಮಳಿಗೆಗಳನ್ನು ಬಂದ್ ಮಾಡಲಾಗುವುದು. ಈಗಾಗಲೇ ಶೇ.90ರಷ್ಟು ಕನ್ನಡ ನಾಮಫಲಕ ಹಾಕಲಾಗಿದೆ. ಇನ್ನು ಉಳಿದಿರುವುದು 3000 ನಾಮಫಲಕಗಳು ಮಾತ್ರ. ಅಂತಾರಾಷ್ಟ್ರೀಯ ಕಂಪನಿಗಳು, ಎಸ್ ಬಿಐ, ಕೇನರಾ ಬ್ಯಾಂಕ್ ಕನ್ನಡ ನಾಮಫಲಕ ಅಳವಡಿಕೆಗೆ ಮತ್ತಷ್ಟು ದಿನ ಗಡುವು ನೀಡುವಂತೆ ಮನವಿ ಮಾಡಿವೆ. ಈ ಬಗ್ಗೆ ನಾಳೆ ಸಂಜೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!