ಏಳು ವರ್ಷಗಳಲ್ಲಿ 60 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ: ಸಿಎಂ ಸಿದ್ದು ವಿಶ್ವಾಸ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂದಿನ ಏಳು ವರ್ಷಗಳಲ್ಲಿ ಕರ್ನಾಟಕ 60 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಸಿದ್ಧತೆಗಳು ಆರಂಭವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ಬೆಂಗಳೂರಿನ ಜಿಕೆವಿಕೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದಕ್ಕೂ ಮುನ್ನ ರೈತ ಸೌರಶಕ್ತಿ ಮೇಳ ಉದ್ಘಾಟಿಸಿದ ಸಿದ್ದರಾಮಯ್ಯ, ಕುಸುಮ್ ಬಿ, ಸಿ ಯೋಜನೆಗಳಿಗೆ ಚಾಲನೆ ನೀಡಿದರಲ್ಲದೆ ನೂತನ ವಿದ್ಯುತ್ ಉಪಕೇಂದ್ರಗಳನ್ನು ಲೋಕಾರ್ಪಣೆ ಗೊಳಿಸಿದರು.

ಸಮಗ್ರ ಕೃಷಿಗೆ ಹೆಚ್ವಿನ ಬೆಂಬಲ ನೀಡುವ ಸಲುವಾಗಿ ಕೃಷಿಯ ಉಪಕಸುಬುಗಳ ಬೆಳವಣಿಗೆಗೆ ಸರ್ಕಾರ ಸಂಪೂರ್ಣ ಸಹಕಾರ, ಬೆಂಬಲ ನೀಡುತ್ತಿದೆ ಎಂದ ಅವರು, ಸೋಲಾರ್ ವಿದ್ಯುತ್ ಪಂಪ್ ಸೆಟ್ ಮತ್ತು ಪಾನಲ್ ಗಳಿಗೆ ರಾಜ್ಯ ಸರ್ಕಾರದ ಸಬ್ಸಿಡಿ ಮೊತ್ತವನ್ನು ಶೇ೩೦ ರಿಂದ ಶೇ50 ಕ್ಕೆ ಹೆಚ್ಚಿಸಿದೆ. ನಮ್ಮ ಸರ್ಕಾರದ ಈ ಸೌಲಭ್ಯವನ್ನು ರೈತರು ಹೆಚ್ಚೆಚ್ಚು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!