ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ನೈನಿತಾಲ್ನಲ್ಲಿ 12 ವರ್ಷದ ಬಾಲಕಿ ಮೇಲೆ 60 ವರ್ಷದ ವ್ಯಕ್ತಿ ಅತ್ಯಾಚಾರವೆಗಿರುವ ಘಟನೆ ನಡೆದಿದೆ. ಇದಾದ ಬಳಿಕ ಕೋಮು ಉದ್ವಿಗ್ನತೆ ಭುಗಿಲೆದ್ದಿದ್ದು, ಪ್ರತಿಭಟನೆ ಮತ್ತು ವಿಧ್ವಂಸಕ ಕೃತ್ಯಗಳಿಗೆ ಕಾರಣವಾಯಿತು. ಜತೆಗೆ ಮಸೀದಿ ಮೇಲೆ ಕಲ್ಲು ತೂರಾಟವೂ ನಡೆದಿದೆ.
ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿರುವ ಆರೋಪಿ ಉಸ್ಮಾನ್, ಬಾಲಕಿಯನ್ನು ಆಮಿಷವೊಡ್ಡಿ ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿ ಈ ಕೃತ್ಯ ಎಸಗಿದ್ದಾನೆ ಎಂದು ವರದಿಯಾಗಿದೆ.
ಏಪ್ರಿಲ್ 30 ರಂದು ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಉಸ್ಮಾನ್ ನನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಬಂಧಿಸಲಾಗಿದೆ. ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿತ್ತು, ಬಳಿಕ ಜನರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಿಂದೂ ಪರ ಸಂಘಟನೆಗಳ ಸದಸ್ಯರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು.
ಮುಸ್ಲಿಮರು ನಡೆಸುತ್ತಿದ್ದ ಅಂಗಡಿಗಳು ಮತ್ತು ತಿನಿಸುಗಳನ್ನು ಸಹ ಅವರು ಧ್ವಂಸಗೊಳಿಸಿದರು. ಹತ್ತಿರದ ಮಸೀದಿಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.