ಅರವತ್ತರ ಹರೆಯದ ಅರ್ಜೆಂಟೀನಾ ಸುಂದರಿ ಅಲೆಜಾಂಡ್ರಾ ಮುಡಿಗೆ ಮಿಸ್ ಯೂನಿವರ್ಸ್ ಬ್ಯೂನಸ್ ಐರಿಸ್ ಕಿರೀಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅರ್ಜೆಂಟೀನಾದ ವಕೀಲೆ ಹಾಗೂ ಪತ್ರಕರ್ತೆಯಾಗಿರುವ ಅಲೆಜಾಂಡ್ರಾ, ತನ್ನ 60ನೇ ವಯಸ್ಸಿನಲ್ಲಿ 2024ರ ಮಿಸ್ ಯೂನಿವರ್ಸ್ ಬ್ಯೂನಸ್ ಐರಿಸ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ!

ಅರ್ಜೆಂಟೀನಾದ ಬ್ಯೂನಸ್ ಐರಿಸ್‌ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ ಸ್ಪರ್ಧೆಯನ್ನು ಗೆಲ್ಲುವ ಮೂಲಕ ಅಲೆಜಾಂಡ್ರಾ, 60ನೇ ವಯಸ್ಸಿನಲ್ಲಿ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆ ಗೆದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಸಾಮಾನ್ಯವಾಗಿ 18-28 ವರ್ಷ ವಯಸ್ಸಿನ ಮಹಿಳೆಯರು ಈ ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದು, ಇತ್ತೀಚೆಗಷ್ಟೇ ಮಿಸ್ ಯೂನಿವರ್ಸ್ ಸಂಸ್ಥೆ ಕಳೆದ ವರ್ಷ ಸ್ಪರ್ಧಿಗಳ ವಯಸ್ಸಿನ ಮಿತಿಯನ್ನು ತೆಗೆದುಹಾಕುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಅದಾದ ಬೆನ್ನಿಗೇ ಇತ್ತೀಚೆಗೆ ಡೊಮಿನಿಕನ್ ರಿಪಬ್ಲಿಕ್‌ನ 47 ವರ್ಷದ ಹೈಡಿ ಕ್ರೂಜ್, ದೇಶದ ಸೌಂದರ್ಯ ರಾಣಿಯ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದರು. ಈಗ ೬೦ರ ಹರೆಯದ ಅಲೆಜಾಂಡ್ರಾ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!