ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಪ್ರತಿದಿನ 6,000 ಕ್ಯೂಸೆಕ್ ಕಾವೇರಿ ನೀರನ್ನು 15 ದಿನಗಳ ಕಾಲ ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮಹತ್ವದ ಸೂಚನೆ ನೀಡಿದ್ದು, ಈ ಆದೇಶಕ್ಕೆ ಕರ್ನಾಟಕ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಕಾವೇರಿ ಜಲಾಶಯಗಳಲ್ಲಿ ನೀರಿನ ಒಳಹರಿವು ಕುಸಿದಿರುವುದನ್ನು ಉಲ್ಲೇಖಿಸಿದ್ದ ಕರ್ನಾಟಕ ಸರ್ಕಾರ, ತಮಿಳುನಾಡಿಗೆ 9,000 ಕ್ಯೂಸೆಕ್ ಬದಲು 2,000 ಕ್ಯೂಸೆಕ್ ನೀರು ಮಾತ್ರ ಬಿಡುಗಡೆ ಮಾಡುವಂತೆ ಮನವಿ ಮಾಡಿತ್ತು. ಆದರೆ ಕರ್ನಾಟಕದ ಮನವಿಯನ್ನು CWMA ತಿರಸ್ಕರಿಸಿ, ತಮಿಳುನಾಡಿಗೆ ಹೇಳಿದಷ್ಟು ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸಿದೆ.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು CWMA ಆದೇಶಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ದೆಹಲಿಯಲ್ಲಿ ಕುಳಿತು ನಮ್ಮ ರಾಜ್ಯದ ಪರಿಸ್ಥಿತಿ ಹಾಗೂ ಜನರ ಸಮಸ್ಯೆ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದರು.
ಇದನ್ನೂ ಓದಿ:
ಕಳೆದ ಒಂದು ವಾರದಿಂದ ನಮ್ಮ ಜಲಾಶಯದಲ್ಲೂ ನೀರಿನ ಮಟ್ಟ ಕಡಿಮೆಯಾಗಿದ್ದು, ಪ್ರತಿದಿನ 6,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವುದು ಅಸಾಧ್ಯ ಎಂದರು.
CWMA ಆದೇಶದ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜತೆಗೆ ಚರ್ಚಿಸಿ, ಅಡ್ವೊಕೇಟ್ ಜನರಲ್ ಹಾಗೂ ಕಾನೂನು ತಜ್ಞರ ಅಭಿಪ್ರಾಯ ಪಡೆದುಕೊಳ್ತೇವೆ. ಬಳಿಕ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಕುರಿತು ನಿರ್ಧಾರ ಮಾಡ್ತೇವೆ ಎಂದು ಚೆಲುವರಾಯಸ್ವಾಮಿ ಹೇಳಿದ್ದಾರೆ.



