Thursday, September 18, 2025

ಆಳಂದದಲ್ಲಿ 6018 ಮತಗಳ್ಳತನ: ರಾಹುಲ್‌ ಗಾಂಧಿ ಗಂಭೀರ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಹೊಸದಿಲ್ಲಿಯಲ್ಲಿ, ಹೈಡ್ರೋಜನ್‌ ಬಾಂಬ್‌ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ವೇಳೆ ಸಾಕಷ್ಟು ಮತಗಳ್ಳತನದ ಆರೋಪ ಮಾಡಿದ್ದಾರೆ.

ಕರ್ನಾಟಕದ ಮತಗಳ್ಳತನದ ಬಗ್ಗೆ ಮಾತನಾಡಿದ್ದು, ಆಳಂದದಲ್ಲಿ ಒಟ್ಟು 6,018 ಮತಗಳನ್ನು ಕಳ್ಳತನ ಮಾಡಲಾಗಿದೆ ಎಂದು ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ರಾಹುಲ್‌ ಗಾಂಧಿ ಅವರು ತಮ್ಮ ಪತ್ರಿಕಾಗೋಷ್ಠಿಯಲ್ಲಿ ಮತದಾರರ ಪಟ್ಟಿಯಿಂದ ಕೈಬಿಡಲಾದ ಮತದಾರರನ್ನು ವೇದಿಕೆ ಮೇಲೆ ಪರಿಚಯಿಸಿದ್ದಾರೆ. ಮೊದಲು ಗೋದಾಭಾಯಿ ಎಂಬ ಮಹಿಳೆಯ ಹೇಳಿಕೆಯ ವಿಡಿಯೋ ಪ್ರದರ್ಶಿಸಿದ ರಾಹುಲ್‌ ಗಾಂಧಿ, ಆ ನಂತರ, ಮತದಾರರ ಪಟ್ಟಿಯಿಂದ ಕೈಬಿಡಲಾದ ವ್ಯಕ್ತಿ ಮತ್ತು ಓರ್ವ ಯುವತಿಯನ್ನು ನೇರವಾಗಿ ಪರಿಚಯಿಸಿದರು.

ಇದನ್ನೂ ಓದಿ