ಏರಿಕೆಯಾಯ್ತು ಕೋವಿಡ್‌ ಪ್ರಕರಣ : ಒಂದೇ ದಿನದಲ್ಲಿ ಬರೋಬ್ಬರಿ 6,050 ಕೊರೊನಾ ಸೋಂಕಿತರು ಪತ್ತೆ !

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಶುರುವಾಗಿದೆ. ಪ್ರತಿ ನಿತ್ಯವೂ ಸಾವಿರದಷ್ಟು ಪ್ರಕರಣಗಳು ಹೆಚ್ಚಳವಾಗುತ್ತಿವೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 6,050 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,45,104ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 53,0943ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 28,303ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,85,858ಕ್ಕೆ ತಲುಪಿದೆ.

ಕೇಂದ್ರವು ನಿಯಮಿತವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ 19 ನಲ್ಲಿ ಮಾರ್ಗಸೂಚಿಗಳನ್ನು ನೀಡಿದೆ. ಈ ಕುರಿತು ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳೊಂದಿಗೆ ಪರಿಶೀಲನೆ ಕೂಡ ನಡೆಸಿದ್ದಾರೆ.

ಕೋವಿಡ್‌ ಹೆಚ್ಚಳ ಹಿನ್ನೆಲೆ ಇಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ ಮಾಂಡವೀಯ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಭಾರತಿ ಪ್ರವೀಣ್ ಪವಾರ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!