Sunday, November 27, 2022

Latest Posts

ಮುಂಬೈ ಏರ್‌ಪೋರ್ಟ್‌ನಲ್ಲಿ ಬರೋಬ್ಬರಿ 61 ಕೆಜಿ ಚಿನ್ನ ವಶ, 7 ಜನರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾನುವಾರ ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ₹32 ಕೋಟಿ ಮೌಲ್ಯದ 61 ಕೆ.ಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಇದು ವಿಮಾನ ನಿಲ್ದಾಣದಲ್ಲಿ ಒಂದೇ ದಿನದಲ್ಲಿ ಇಲಾಖೆ ನಡೆಸಿದ ಅತ್ಯಧಿಕ ಮೌಲ್ಯದ ಚಿನ್ನಾಭರಣ ವಶವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶುಕ್ರವಾರ ನಡೆದ ದಾಳಿಯಲ್ಲಿ ಏಳು ಪ್ರಯಾಣಿಕರನ್ನು ಬಂಧಿಸಿದ್ದಾರೆ. ಇದರಲ್ಲಿ ಐವರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮೊದಲ ಕಾರ್ಯಾಚರಣೆಯಲ್ಲಿ, ಟಾಂಜಾನಿಯಾದಿಂದ ಹಿಂದಿರುಗಿದ ನಾಲ್ವರು ಭಾರತೀಯರು 1 ಕೆಜಿ ಚಿನ್ನದ ತುಂಡುಗಳನ್ನು ಸಾಗಿಸುತ್ತಿರುವುದು ಕಂಡುಬಂದಿದೆ. ಅವುಗಳನ್ನುವಿಶೇಷವಾಗಿ ವಿನ್ಯಾಸಗೊಳಿಸಲಾದ ಬೆಲ್ಟ್‌ಗಳಲ್ಲಿ ಮರೆಮಾಡಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಬೆಲ್ಟ್‌ಗಳಿಂದ ₹ 28.17 ಕೋಟಿ ಮೌಲ್ಯದ ಯುಎಇ ನಿರ್ಮಿತ 53 ಕೆಜಿ ಚಿನ್ನದ ತುಂಡುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.
ದೋಹಾ ವಿಮಾನ ನಿಲ್ದಾಣದಲ್ಲಿ ಸುಡಾನ್ ಪ್ರಜೆಯೊಬ್ಬ ಪ್ರಯಾಣಿಕರಿಗೆ ಈ ಬೆಲ್ಟ್‌ಗಳನ್ನು ಹಸ್ತಾಂತರಿಸಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ನಾಲ್ವರು ಪ್ರಯಾಣಿಕರನ್ನು ಬಂಧಿಸಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಅವರು ಹೇಳಿದರು.
ಅದೇ ರೀತಿ ದುಬೈನಿಂದ ಬಂದಿದ್ದ ಮೂವರು ಪ್ರಯಾಣಿಕರಿಂದ ₹ 3.88 ಕೋಟಿ ಮೌಲ್ಯದ 8 ಕೆಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು. ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೇಣದ ರೂಪದಲ್ಲಿ ಚಿನ್ನವನ್ನು ಸಾಗಿಸುತ್ತಿದ್ದರು ಎಂದು ಅವರು ಹೇಳಿದರು.
ಪ್ರಯಾಣಿಕರು ಧರಿಸಿದ್ದ ಜೀನ್ಸ್‌ನ ಸೊಂಟದ ರೇಖೆಯಲ್ಲಿ ಚಿನ್ನವನ್ನು ಜಾಣ್ಮೆಯಿಂದ ಮರೆಮಾಡಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!