ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಮೂವರು ಸಚಿವರು, ಸಾಹಿತಿಗಳು ಮತ್ತು ಚಿತ್ರ ನಟರಿಗೆ ಜೀವ ಬೆದರಿಕೆ ಹಾಕಿರುವ ಅನಾಮಧೇಯ ಪತ್ರವೊಂದು ಬಂದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪತ್ರದಲ್ಲಿ ಹಲವು ಪ್ರಗತಿಪರರು, ವಿಚಾರವಾದಿಗಳಿಗೂ, ಸಾಹಿತಿಗಳು, ನಟರು, ಸಚಿವರ ಹೆಸರುಗಳನ್ನು ಉಲ್ಲೇಖಿಸಿ ಆರೋಪಿಯು ಜೀವ ಬೆದರಿಕೆ ಹಾಕಿದ್ದಾನೆ.
ಸೆಪ್ಟೆಂಬರ್ 20 ರಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೈಲೂರು ನಿಷ್ಕಲ ಮಂಟಪ ಆಶ್ರಮಕ್ಕೆ ಬೆದರಿಕೆ ಪತ್ರ ಬಂದಿದೆ. ಅದೇ ರೀತಿ ಸಚಿವ ಸತೀಶ ಜಾರಕಿಹೊಳಿ ಸೇರಿ ಒಟ್ಟು 61 ಪ್ರಗತಿಪರ ಸಾಹಿತಿಗಳು, ನಟರಿಗೆ ಅನಾಮಧೇಯ ವ್ಯಕ್ತಿ ಜೀವ ಬೆದರಿಕೆ ಹಾಕಲಾಗಿದೆ.
ಸಾಹಿತಿಗಳಾದ ಎಸ್ ಜಿ ಸಿದ್ದರಾಮಯ್ಯ, ಕೆ ಮರುಳಸಿದ್ದಪ್ಪ, ಬರಗೂರು ರಾಮಚಂದ್ರಪ್ಪ, ಭಾಸ್ಕರ್ ಪ್ರಸಾದ್, ಪ್ರೊ. ಭಗವಾನ್, ಪ್ರೊ. ಮಹೇಶ್ ಚಂದ್ರ, ಬಿಟಿ ಲಲಿತಾನಾಯಕ್, ನಟ ಚೇತನ್, ನಟ ಪ್ರಕಾಶ್ ರಾಜ್, ಸಚಿವರಾದ ಪ್ರಿಯಾಂಕ್ ಖರ್ಗೆ, ಸತೀಶ ಜಾರಕಿಹೊಳಿ, ದಿನೇಶ್ ಗುಂಡೂರಾವ್, ದ್ವಾರಕಾನಾಥ, ದೇವನೂರು ಮಹದೇಪ್ಪ, ಬಿ. ಎಲ್. ವೇಣು ಅವರಿಗೆ ಅನಾಮಧೇಯ ವ್ಯಕ್ತಿ ಜೀವ ಬೆದರಿಕೆ ಹಾಕಿದ್ದಾನೆ.
ಪತ್ರದಲ್ಲಿ, ನಿಜಗುಣಾನಂದ ನಾನು ಬರೆದಿರುವ ಪತ್ರ ಪ್ರೇಮ ಪತ್ರ ಅಂತಾದರೂ ತಿಳಿ, ಅಥವಾ ಸಾವಿನ ಪತ್ರವಂತಾದರೂ ತಿಳಿ, ನಾನು ನಿನ್ನ ಜತೆ ತಮಾಷೆ ಮಾಡುತ್ತಿಲ್ಲ, ನೀನು ಆಯೋಜಿಸುವ ಪಾಪದ ಕಾರ್ಯಕ್ರಮದಲ್ಲೇ ನಿನ್ನ ಕಣ್ಣೆದುರಿಗೆ ನಿನ್ನ ಸಾವು ಬರುತ್ತೆ” ಎಂದು ಉಲ್ಲೇಖಿಸಲಾಗಿದೆ.
ಹಿಂದು ಧರ್ಮದ ದೇವತೆಗಳನ್ನು ನಿಂದಿಸುವ ನೀನು ನಿನ್ನ ಜೀವನದ ಕೊನೆಯ ಘಟ್ಟದಲ್ಲಿ ನೀನು ನಿಂತಿದ್ದೀಯಾ, ನಿನ್ನ ಹತ್ಯೆ ಬಿಟ್ಟರೆ ಬೇರೆ ದಾರಿ ಇಲ್ಲ ಎಂದು ಪತ್ರದಲ್ಲಿ ಬರೆದಿದ್ದಾನೆ .
ಎಸ್ ಜಿ ಸಿದ್ದರಾಮಯ್ಯ, ಕೆ ಮರುಳಸಿದ್ದಪ್ಪ, ಬರಗೂರು ರಾಮಚಂದ್ರಪ್ಪ, ಭಾಸ್ಕರ್ ಪ್ರಸಾದ್, ಪ್ರೊ. ಭಗವಾನ್, ಪ್ರೊ. ಮಹೇಶ್ ಚಂದ್ರ, ಬಿಟಿ ಲಲಿತಾ ನಾಯಕ್, ನಟ ಚೇತನ್, ನಟ ಪ್ರಕಾಶ್ ರಾಜ್, ಪ್ರಿಯಾಂಕ್ ಖರ್ಗೆ, ಜಾರಕಿಹೊಳಿ, ದಿನೇಶ್ ಗುಂಡೂರಾವ್, ಧ್ವಾರಕಾನಾಥ, ದೇವನೂರು ಮಹದೇವ, ಬಿ ಎಲ್ ವೇಣು, ನೀವು ನಾನು ಕೇಳುವ ಪ್ರಶ್ನೆಗೆ ಉತ್ತರ ಕೊಡಿ ಎಂದು ಸಚಿವರು, ಸ್ವಾಮೀಜಿಗಳು, ನಟರು, ಸಾಹಿತಿಗಳು, ಪ್ರಗತಿಪರರ ಹೆಸರುಗಳನ್ನು ಉಲ್ಲೇಖಿಸಿ ಜೀವ ಬೆದರಿಕೆ ಹಾಕಿದ್ದಾನೆ.