ವಿಜಯಸಂಕಲ್ಪ ಸಭೆಯಲ್ಲಿ 6,100ಕೋಟಿ ರೂ. ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿ ನರೇಂದ್ರ ಮೋದಿ ತೆಲಂಗಾಣ ಪ್ರವಾಸದ ಭಾಗವಾಗಿ ಹನಮಕೊಂಡ ಕಲಾ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ವಿಜಯಸಂಕಲ್ಪ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಹಾಗೂ ತೆಲಂಗಾಣ ಬಿಜೆಪಿ ಅಧ್ಯಕ್ಷ ಕಿಶನ್ ರೆಡ್ಡಿ ಅವರು ಶ್ರೀ ವೆಂಕಟೇಶ್ವರ ಸ್ವಾಮಿಯ ಪ್ರತಿಮೆಯನ್ನು ನೀಡಿ ಗೌರವಿಸಿದರು. ಈ ವೇದಿಕೆಯಲ್ಲಿ ಸಾವಿರಾರು ಕೋಟಿ ಅಭಿವೃದ್ದಿ ಕಾರ್ಯಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಮೋದಿ ಶಂಕುಸ್ಥಾಪನೆ ಮಾಡಿದ ಅಭಿವೃದ್ಧಿ ಯೋಜನೆಗಳು

  • 6,100 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.
  • ರೂ. 521 ಕೋಟಿ ವೆಚ್ಚದಲ್ಲಿ ರೈಲ್ವೇ ವ್ಯಾಗನ್ ಮ್ಯಾನ್ ಉತ್ಪಾದನಾ ಘಟಕಕ್ಕೆ ಮೋದಿ ಶಂಕುಸ್ಥಾಪನೆ
  • ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣೆಯ ಭಾಗವಾಗಿ ಪ್ರಧಾನಿ ಮೋದಿ N-163G ಅನ್ನು ಉದ್ಘಾಟನೆ
  • ರೂ. 2,147 ಕೋಟಿ ಜಗಿತ್ಯಾಲ – ಕರೀಂನಗರ – ವಾರಂಗಲ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಶಂಕುಸ್ಥಾಪನೆ
  • ರೂ. 3,441 ಕೋಟಿ ವೆಚ್ಚದಲ್ಲಿ ಮಂಚಿರ್ಯಾಲ-ವಾರಂಗಲ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಶಂಕುಸ್ಥಾಪನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!