Sunday, December 21, 2025

ರಾಜ್ಯದಲ್ಲಿ 61299 ಸ್ವಯಂ ಪ್ರೇರಿತ ದೂರು ದಾಖಲು: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕಳೆದ 2.5 ವರ್ಷದಲ್ಲಿ ಪೊಲೀಸರು 61299 ಸ್ವಯಂ ಪ್ರೇರಿತ ದೂರುಗಳನ್ನು ದಾಖಲು ಮಾಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಶಾಸಕ ಸಿ. ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ದಾಖಲು ಮಾಡಿರುವ ಸ್ವಯಂ ಪ್ರೇರಿತ ದೂರುಗಳಲ್ಲಿ 57646 ದೂರುಗಳಿಗೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದ್ದು, ಯಾವುದೇ ದೂರಗಳನ್ನು ಹಿಂಪಡೆದಿಲ್ಲ ಎಂದು ತಿಳಿಸಿದರು.

ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸುವಾಗ, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಂದರ್ಭ, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯನ್ನುಂಟು ಮಾಡಿದ ಸಂದರ್ಭ, ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದಲ್ಲಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದಲ್ಲಿ, ವಾರಸುದಾರರು ಯಾರೂ ಇಲ್ಲದೇ ಇರುವ ಪ್ರಕರಣಗಳಲ್ಲಿ, ದ್ವೇಷಭಾಷಣ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುವ ಸಂದರ್ಭಗಳಲ್ಲಿ, ಕೆಲವು ಪ್ರಕರಣಗಳಲ್ಲಿ ಸಾರ್ವಜನಿಕರು ದೂರು ನೀಡಲು ಬಾರದೇ ಇದ್ದ ಸಂದರ್ಭಗಳಲ್ಲಿ ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುವುದು ಎಂದರು.

ಕಳೆದ ಮೂರು ವರ್ಷದಿಂದ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಒಟ್ಟು 12 ಮಂದಿಯ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ತಿಳಿಸಿದರು.

error: Content is protected !!