ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ 6150 ಜನರಿಗೆ ಕೊರೋನಾ ಪಾಸಿಟಿವ್ ಕೇಸ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6150 ಜನರಿಗೆ ಕೊರೋನಾ ಪಾಸಿಟಿವ್ ಕೇಸ್ ದೃಢಪಟ್ಟಿದೆ. ಅಲ್ಲದೇ ಸೋಂಕಿತ 39 ಜನರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 4266 ಸೇರಿದಂತೆ ರಾಜ್ಯಾಧ್ಯಂತ 6150 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 10,26,584 ಕ್ಕೆ ಏರಿಕೆಯಾಗಿದೆ. 3487 ಸೋಂಕಿತರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ಬೆಂಗಳೂರಿನಲ್ಲಿ ಇಂದು 4266 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,55,025 ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 26 ಜನರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದು, ಇದುವರೆಗೆ 4693 ಸೋಂಕಿತರು ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss