Thursday, December 4, 2025

ಕರ್ನಾಟಕದಲ್ಲಿ ಶೇ. 63 ರಷ್ಟು ಭ್ರಷ್ಟಾಚಾರ: ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವರದಿಯೊಂದನ್ನು ಹಂಚಿಕೊಂಡು ಅವರು ಪೋಸ್ಟ್ ಮಾಡಿದ್ದು, ಶೇ.40 ರಷ್ಟು ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರೇ, ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ, ಕರ್ನಾಟಕದಲ್ಲಿ ಶೇ. 63% ಭ್ರಷ್ಟಾಚಾರ ಇದೆ ಸ್ವತಃ ಮಾನ್ಯ ಉಪ ಲೋಕಾಯುಕ್ತರೇ ತಮ್ಮ ಘನ ಸರಕಾರಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಈಗೇನು ಹೇಳುತ್ತೀರಿ? ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೀರಾ? ಅಥವಾ ಇದೇ ಭಂಡ ಬಾಳು ಮುಂದುವರೆಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

error: Content is protected !!