October 10, 2026
Saturday, October 10, 2026
spot_img

ವಿಮಾನದಲ್ಲೇ ಗಗನಸಖಿಗೆ ಕಿರುಕುಳ: 63 ವರ್ಷದ ಪ್ರಯಾಣಿಕ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿಗೆ ಆಗಮಿಸುತ್ತಿದ್ದ ಅಂತಾರಾಷ್ಟ್ರೀಯ ವಿಮಾನದಲ್ಲಿ ಗಗನಸಖಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪದ ಮೇಲೆ ಹಿರಿಯ ವಯಸ್ಸಿನ ಪ್ರಯಾಣಿಕನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ವಿಮಾನ ಇಳಿದ ತಕ್ಷಣವೇ ಸಿಬ್ಬಂದಿ ನೀಡಿದ ದೂರಿನ ಆಧಾರದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಬಹ್ರೇನ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ಪ್ರಯಾಣದ ಕೊನೆಯ ಹಂತದಲ್ಲಿ, 24 ವರ್ಷದ ಗಗನಸಖಿಯೊಂದಿಗೆ ಪ್ರಯಾಣಿಕ ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ. ಘಟನೆ ನಡೆದ ಕೂಡಲೇ ಗಗನಸಖಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ:

ವಿಮಾನ ಸಿಬ್ಬಂದಿ ತಕ್ಷಣವೇ ಕ್ಯಾಪ್ಟನ್‌ಗೆ ಮಾಹಿತಿ ನೀಡಿದ್ದು, ವಿಮಾನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. ದೂರಿನ ಮೇರೆಗೆ ಆರೋಪಿಯನ್ನು ವಿಚಾರಣೆ ನಡೆಸಿ ಬಂಧಿಸಲಾಗಿದೆ.

ವಿಚಾರಣೆ ವೇಳೆ ಆತ ತನ್ನ ನಡೆಗೆ ಬೇರೆ ಅರ್ಥ ನೀಡಲು ಯತ್ನಿಸಿದ್ದರೂ, ದೂರುದಾರೆಯ ಹೇಳಿಕೆ ಮತ್ತು ಪ್ರಾಥಮಿಕ ಪರಿಶೀಲನೆಯ ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯರ ಸುರಕ್ಷತೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂಬ ಸಂದೇಶದೊಂದಿಗೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Must Read