ಕೊಡಗು ಜಿಲ್ಲೆಯಲ್ಲಿ 633 ಹೊಸ ಕೋವಿಡ್ ಪ್ರಕರಣ ಪತ್ತೆ

ಹೊಸದಿಗಂತ ವರದಿ,ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಭಾನುವಾರ 633ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ದಿನದ ಪಾಸಿಟಿವಿಟಿ ದರ ಶೇ.30.74ರಷ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 186, ಸೋಮವಾರಪೇಟೆ ತಾಲೂಕಿನಲ್ಲಿ 168 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 238 ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 43,877ರಷ್ಟಾಗಿದೆ.
ಕಳೆದ 24 ಗಂಟೆಗಳಲ್ಲಿ 526 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ಒಟ್ಟು 39,460ಮಂದಿ ಸೋಂಕಿನಿಂದ ಮುಕ್ತರಾದಂತಾಗಿದೆ.ಮತ್ತು ಇದುವರೆಗೆ ಒಟ್ಟು 442 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 3977 ಸಕ್ರಿಯ ಪ್ರಕರಣಗಳಿದ್ದು, 272 ಕಂಟೈನ್ ಮೆಂಟ್ ವಲಯಗಳಿವೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!