ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 64 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಟೇಕುಲಪಾಲೆಂ ಗ್ರಾಮದ ಮಂಡಲ ಪರಿಷತ್ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದಿದೆ.
ವರದಿಯ ಪ್ರಕಾರ ಶಾಲೆಯಲ್ಲಿ ಅನ್ನ ಬೇಯಿಸುವಾಗ ಪಾತ್ರೆಗೆ ಹಲ್ಲಿ ಬಿದ್ದಿದೆ. ಇದನ್ನು ಗಮನಿಸದ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ಬಡಿಸಿದ್ದಾರೆ. ಆಹಾರ ಸೇವಿಸಿದ ಒಂದು ಗಂಟೆಯ ಬಳಿಕ ಮಕ್ಕಳು ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.