ನವದೆಹಲಿ: 65ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಎಲ್ಲೆಡೆ ಮನೆಮಾಡಿದ್ದು, ಪ್ರಧಾನಿ ಮೋದಿ ಸಮಸ್ತ ಕನ್ನಡ ಜನತೆಗೆ ಶುಭಾಷಯಗಳನ್ನು ಕೋರಿದ್ದಾರೆ.
ಕನ್ನಡದಲ್ಲಿಯೇ ಶುಭಾಷಯ ಕೋರಿರುವ ಪ್ರಧಾನಿ ಮೋದಿ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಷಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲದಿಂದ ಕರ್ನಾಟಕ ಪ್ರಗತಿಯು ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಕನ್ನಡದಲ್ಲಿಯೇ ಪ್ರಧಾನಿ ಮೋದಿ ಟ್ವೀಟ್ ಮಾಡಿರುವುದಕ್ಕೆ ಕನ್ನಡಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ರೀ ಟ್ವೀಟ್ ಕೂಡ ಮಾಡುತ್ತಿದ್ದಾರೆ.
ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.
— Narendra Modi (@narendramodi) November 1, 2020