ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 65 ಸಾಧಕರಿಗೆ ʼರಾಜ್ಯೋತ್ಸವ ಪ್ರಶಸ್ತಿʼ ಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಧಾನ ಮಾಡಿದರು .
ಬಳಿಕ ಮಾತನಾಡಿದ ಅವರು, ನಮ್ಮ ಭಾಷೆ, ನಾಡು, ನುಡಿ, ಸಾಹಿತ್ಯ, ಸಂಸ್ಕೃತಿ ಎನ್ನುವುದು ಆಸ್ಮಿತೆಯ ಭಾಗ. ಭಾಷೆ ಮತ್ತು ಜನ್ಮಭೂಮಿ ನಮಗೆ ಹೆತ್ತ ತಾಯಿಗೆ ಸಮಾನ. ಹೆತ್ತ ತಾಯಿಗೆ ಸಲ್ಲುವಂಥ ಎಲ್ಲ ಗೌರವ, ಆದರಗಳು ನಮ್ಮ ಭಾಷೆ ಮತ್ತು ಹುಟ್ಟಿದ ನಾಡಿಗೆ ಸಲ್ಲಬೇಕು’ ಎಂದು ಹೇಳಿದರು.
‘ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರಸ್ಥಾನವಿದ್ದು, ಕನ್ನಡವನ್ನ ನಾವು ಬೆಳೆಸಬೇಕು. ಕನ್ನಡ ಭಾಷೆಯ ಅಭಿವೃದ್ಧಿಗೆ ಸರ್ಕಾರ ಸದಾ ಬದ್ಧವಾಗಿದೆ. ಇನ್ನು ಮುಂದಿನ ಒಂದು ವರ್ಷ ಕನ್ನಡ ಕಾಯಕ ವರ್ಷ ಎಂದು ಆಚರಿಸಲಾಗುತ್ತಿದ್ದು, ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ಪೂರಕವಾದ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗುವುದು ಎಂದರು.