ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಿದ್ದು, ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಪ್ರಕಟಿಸಿದ್ದು, ಇಂದು ಮಧ್ಯಾಹ್ನ 12.30ರ ನಂತರ ಇಲಾಖೆಯ ವೆಬ್ ಸೈಟ್ ಗಳಲ್ಲಿ ಫಲಿತಾಂಶಗಳನ್ನು ವೀಕ್ಷಿಸಬಹುದು.
ಕಳೆದ ವರ್ಷಕ್ಕಿಂತ ಶೇಕಡಾ 8ರಷ್ಟು ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ.
ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.