ತುಂಗಭದ್ರಾ ಜಲಾಶಯದಿಂದ ಮತ್ತಷ್ಟು ನೀರು ಬಿಡುಗಡೆ: ನದಿಪಾತ್ರದಲ್ಲಿ ಪ್ರವಾಹ ಭೀತಿ

ಹೊಸದಿಗಂತ ವರದಿ, ಕೊಪ್ಪಳ:
ತುಂಗಭದ್ರಾ ಜಲಾಶಯ ಭಾಗಶಃ ಭರ್ತಿಯಾಗಿದ್ದು, ಬುಧವಾರ 20 ಕ್ರಸ್ಟ್‌ ಗೇಟ್ ಗಳ ಮೂಲಕ 66 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ.
ಎಲ್ಲ ಕ್ರಸ್ಟ್ ಗೇಟ್ ತೆರೆಯುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ.
ಜಲಾಶಯ 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಹೊಂದಿದ್ದು, ಪ್ರಸ್ತುತ 99 ಟಿಎಂಸಿ ನೀರು ಸಂಗ್ರಹವಾಗಿದೆ. 93 ಸಾವಿರ ಕ್ಯುಸೆಕ್‌ಗೂ ಅಧಿಕ ಒಳಹರಿವು ಇದ್ದು, ನಿತ್ಯ ಸರಾಸರಿ 7 ಟಿಎಂಸಿ ಅಡಿ ನೀರು ಹರಿದು ಬರುತ್ತಿದ್ದು, ಬುಧವಾರ ಸಂಜೆ ವೇಳೆಗೆ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ. ಇದನ್ನು ಮನಗಂಡ ಕಾಡಾ ಅಧಿಕಾರಿಗಳು ನದಿಗೆ ನೀರು ಬಿಡುಗಡೆಗೊಳಿಸಿದ್ದಾರೆ.
ತುಂಗಭದ್ರಾ ಜಲಾಶಯದಿಂದ ನೀರು ಬಿಟ್ಟರೆ ಪ್ರವಾಹ ಭೀತಿ ಉಂಟಾಗಬಹುದು ಎಂದು ಈಗಾಗಲೇ ಕೊಪ್ಪಳ, ವಿಜಯನಗರ, ಬಳ್ಳಾರಿ, ರಾಯಚೂರು ಮತ್ತು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಮಂಡಳಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!