ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಂಗಳವಾರ ಹೊಸದಾಗಿ 67 ಮಂದಿಯಲ್ಲಿ ಕೋವಿಡ್ ವೈರಸ್ ಪತ್ತೆಯಾಗಿದೆ.
ಒಟ್ಟು 571 ಮಂದಿಯನ್ನು ಪರೀಕ್ಷಿಸಲಾಗಿತ್ತು. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1287ಕ್ಕೆ ಏರಿಕೆಯಾಗಿದೆ.
ಇದೇ ಸಂದರ್ಭ ಇಂದು ರಾಜ್ಯದಲ್ಲಿ ಕೋವಿಡ್‌ಗೆ ಇಬ್ಬರು ಬಲಿಯಾಗಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಸಧ್ಯ 459 ಸಕ್ರಿಯೆ ಪ್ರಕರಣಗಳಿದ್ದು, ಈ ಪೈಕಿ 453 ಮಂದಿ ಮನೆ ಆರೈಕೆಯಲ್ಲಿದ್ದಾರೆ ಮತ್ತು 6 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ