69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ರಾಜ್ಯಾದ್ಯಂತ 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಶುಭಾಶಯ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡವನ್ನು ದೈನಂದಿನ ಜೀವನದಲ್ಲಿ ಹೆಚ್ಚು ಬಳಸೋಣ, ಕನ್ನಡವನ್ನು ಬೆಳೆಯುವಂತೆ ಮಾಡೋಣ, ದೈನಂದಿನ ಜೀವನದಲ್ಲಿ ಕನ್ನಡವನ್ನು ಹೆಚ್ಚು ಬಳಸೋಣ. ‘ಸಿರಿಗನ್ನಡಂ ಗೆಲ್ಗೆ – ಸಿರಿಗನ್ನಡಂ ಬಾಳ್ಗೆ’ ಎಂದು ಸಿದ್ದರಾಮಯ್ಯ ಶುಭ ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!