ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಐಪಿಎಲ್​ನ 6ನೇ ಪಂದ್ಯ: ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಹೈದರಾಬಾದ್​

ಹೊಸದಿಗಂತ ಆನ್ ಲೈನ್ ಡೆಸ್ಕ್:

ಐಪಿಎಲ್​ನ 6ನೇ ಪಂದ್ಯದಲ್ಲಿ ಟಾಸ್​ ಗೆದ್ದ ಸನ್​ರೈಸರ್ಸ್ ಹೈದರಾಬಾದ್​ ತಂಡದ ನಾಯಕ ಡೇವಿಡ್ ವಾರ್ನರ್​ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮೊದಲ ಪಂದ್ಯದಲ್ಲಿ ವಾರ್ನರ್​ ಪಡೆ ಕೆಕೆಆರ್ ವಿರುದ್ಧ 10 ರನ್​ಗಳ ಸೋಲು ಕಂಡಿತ್ತು. ಆರ್​ಸಿಬಿ ವಿರುದ್ಧ ಇದೀಗ ಗೆಲುವಿನ ಹಳಿಗೆ ಮರಳುವ ಆಲೊಚನೇಯಲ್ಲಿದೆ.
ಇಂದಿನ ಪಂದ್ಯದಲ್ಲಿ 2 ಬದಲಾವಣೆ ಮಾಡಿಕೊಂಡಿದೆ. ಆಲ್​ರೌಂಡರ್​ ನಬಿ ಬದಲಿಗೆ ಹೋಲ್ಡರ್, ಸಂದೀಪ್ ಶರ್ಮಾ ಬದಲಿಗೆ ನದೀಮ್​ ಕಣಕ್ಕಿಳಿಯಲಿದ್ದಾರೆ.
ಆರ್​ಸಿಬಿ ಕಡೆ ಆರಂಭಿಕ ಬ್ಯಾಟ್ಸ್​ಮನ್ ದೇವದತ್​ ಪಡಿಕ್ಕಲ್​ ತಂಡಕ್ಕೆ ಸೇರಿಕೊಂಡಿದ್ದು, ನಾಯಕ ವಿರಾಟ್ ಕೊಹ್ಲಿ ಜೊತೆಗೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ರಜತ್ ಪಾಟಿದಾರ್​ ತಂಡದಿಂದ ಹೊರಬಿದ್ದಿದ್ದಾರೆ.
ಸನ್​ರೈಸರ್ಸ್ ಹೈದರಾಬಾದ್​
ಡೇವಿಡ್ ವಾರ್ನರ್ (ನಾಯಕ), ವೃದ್ಧಿಮಾನ್ ಸಹಾ (ವಿಕೀ), ಮನೀಶ್ ಪಾಂಡೆ, ಜಾನಿ ಬೈರ್‌ಸ್ಟೋವ್, ಜೇಸನ್ ಹೋಲ್ಡರ್ , ವಿಜಯ್ ಶಂಕರ್, ಅಬ್ದುಲ್ ಸಮದ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಶಹ್ಬಾಜ್ ನದೀಮ್, ನಟರಾಜನ್
ಆರ್ ಸಿಬಿ ತಂಡ
ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಗ್ಲೆನ್ ಮ್ಯಾಕ್ಸ್ ವೆಲ್, ಎಬಿ ಡಿವಿಲಿಯರ್ಸ್ (ವಿಕೀ),ಶಹ್ಬಾಜ್ ಅಹ್ಮದ್, ವಾಷಿಂಗ್ಟನ್ ಸುಂದರ್, ಡೇನಿಯಲ್ ಕ್ರಿಸ್ಚಿಯನ್, ಕೈಲ್ ಜೇಮೀಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss