ಬೆಂಗಳೂರು: ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹವಮಾನ ಇಲಾಖೆ ತಿಳಿಸಿದ್ದು, 7 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಚಾಮರಾಜ ನಗರ, ರಾಮನಗರ, ಬೆಂಗಳೂರು ನಗg, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಸೆ. ೨ ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಹವಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮಲೆನಾಡು, ಕರಾವಳಿ ಭಾಗ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.