EARTHQUAKE | ತೈವಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತೈವಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.

ಈ ಭೂಕಂಪದ ಜೊತೆಗೆ ಸುನಾಮಿ ಎಚ್ಚರಿಕೆಯನ್ನೂ ಕೂಡ ನೀಡಲಾಗಿದ್ದು, ತೈವಾನ್‌ ಜನತೆ ಬೆಚ್ಚಿ ಬಿದ್ದಿದ್ದಾರೆ.

ತೈವಾನ್‌ನ ಕರಾವಳಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ 7.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಜಧಾನಿ ತೈಪೆಯನ್ನು ನಡುಗಿಸಿದೆ. ಭೂಕಂಪದಿಂದಾಗಿ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಪೂರ್ವ ತೈವಾನ್‌ನಲ್ಲಿ ಹಲವಾರು ಕಟ್ಟಡಗಳು ಕುಸಿದಿವೆ,  ಸಾವುನೋವುಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

921 Earthquake Museum of Taiwan > Taichung City > Tourism Administration, Republic of China (Taiwan)ತೈವಾನ್ ಮತ್ತು ಓಕಿನಾವಾ, ಜಪಾನ್ ಮತ್ತು ಫಿಲಿಪೈನ್ಸ್‌ನಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ತೈವಾನ್‌ನಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ತೈವಾನ್ ದೂರದರ್ಶನ ಕೇಂದ್ರಗಳು ಭೂಕಂಪದ ಕೇಂದ್ರದ ಸಮೀಪವಿರುವ ಹುವಾಲಿಯನ್‌ನಲ್ಲಿ ಕೆಲವು ಕುಸಿದ ಕಟ್ಟಡಗಳ ಚಿತ್ರಗಳನ್ನು ತೋರಿಸಿವೆ. ಶಾಂಘೈ ವರೆಗೂ ಭೂಕಂಪನದ ಅನುಭವವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!