ನ್ಯೂ ಕ್ಯಾಲೆಡೋನಿಯಾದಲ್ಲಿ 7.7 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನ್ಯೂ ಕ್ಯಾಲೆಡೋನಿಯಾದ ಲಾಯಲ್ಟಿ ಐಲ್ಯಾಂಡ್‌ನ ಆಗ್ನೇಯದಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿದೆ. ಶುಕ್ರವಾರ ಮುಂಜಾನೆ ಭೂಮಿ ನಡುಗಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

10 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ಹೇಳಿದೆ.

ಈ ಭೂಕಂಪವು ನ್ಯೂ ಕ್ಯಾಲೆಡೋನಿಯಾ, ಫಿಜಿ ಮತ್ತು ವನವಾಟು ಪ್ರದೇಶಗಳಲ್ಲಿ ಸುನಾಮಿ ಭಯದ ವಾತಾವರಣವನ್ನು ಉಂಟುಮಾಡಿದೆ ಎಂದು ಯುಎಸ್ ಸುನಾಮಿ ಎಚ್ಚರಿಕೆ ವ್ಯವಸ್ಥೆ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!