ಅರುಣಾಚಲ ಪ್ರದೇಶ: ಹಿಮದಡಿ ಸಿಲುಕಿದ್ದ 7 ಸೈನಿಕರ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅರುಣಾಚಲ ಪ್ರದೇಶದ ಪಶ್ಚಿಮ ಈಶಾನ್ಯ ಗಡಿಯಲ್ಲಿನ ಕಮೆಂಗ್‌ ಪ್ರದೇಶದಲ್ಲಿ ಉಂಟಾದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ 7 ಸೈನಿಕರ ಮೃತದೇಹ ಪತ್ತೆಯಾಗಿದೆ.
ಹಿಮದಲ್ಲಿ ಸಿಲುಕಿದ್ದ ಯೋಧರ ರಕ್ಷಣೆಗಾಗಿ ಕಾರ್ಯಾಚರಣೆ ನಡೆದಿದ್ದು, ಇದೀಗ ಎಲ್ಲಾ 7 ಯೋಧರ ಮೃತ ದೇಹವನ್ನು ಹೊರತೆಗೆಯಲಾಗಿದ್ದು, ಅವುಗಳನ್ನು ಸೇನಾ ಸಿಬ್ಬಂದಿಗೆ ಹಸ್ತಾಂತರಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಭಾರೀ ಹಿಮಪಾತದೊಂದಿಗೆ ಈ ಪ್ರದೇಶವು ಪ್ರತಿಕೂಲ ಹವಾಮಾನಕ್ಕೆ ಸಾಕ್ಷಿಯಾಗಿತ್ತು. ಭಾನುವಾರ ಯೋಧರು ಗಸ್ತು ತಿರುಗುತ್ತಿದ್ದ ವೇಳೆ ಸಂಭವಿಸಿದ ಹಿಮಪಾತಕ್ಕೆ 7 ಸೈನಿಕರು ಸಿಲುಕಿ, ಮೃತಪಟ್ಟಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!