ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಸೂಟ್‌ಕೇಸ್‌ನಲ್ಲಿ 17 ವರ್ಷದ ಯುವತಿಯ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಚಂದಾಪುರದ ರೈಲ್ವೆ ಬ್ರಿಡ್ಜ್ ಬಳಿ ಹರಿದು ಹೋಗಿದ್ದ ನೀಲಿ ಬಣ್ಣದ ಸೂಟ್‌ಕೇಸ್‌ನಲ್ಲಿ 17 ವರ್ಷದ ಯುವತಿಯ ಶವ ಪತ್ತೆಯಾಗಿತ್ತು. ಕೊಲೆಯಾದ ಯುವತಿಯನ್ನು ರೀಮಾ ಎಂದು ಗುರುತಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸೂರ್ಯನಗರದ ಪೊಲೀಸರು, 7 ಆರೋಪಿಗಳನ್ನು ಬಿಹಾರದಲ್ಲಿ ಪತ್ತೆ ಮಾಡಿದ್ದು, ಅವರನ್ನು ಬೆಂಗಳೂರಿಗೆ ಕರೆ ತರುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ ಬಿಹಾರದ ನವಾಡ ಜಿಲ್ಲೆಯವರು ಎಂದು ತಿಳಿದು ಬಂದಿದೆ.
ಏಳು ಆರೋಪಿಗಳಲ್ಲಿ ಮೂವರನ್ನು ಆಶಿಕ್ ಕುಮಾರ್, ಮುಖೇಶ್ ಮತ್ತು ರಾಜಾರಾಮ್ ಮೋಹನ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ ಆರೋಪಿಗಳಲ್ಲಿ ಒಬ್ಬನಾದ ಆಶಿಕ್ ಕುಮಾರ್ ವಿವಾಹಿತನಾಗಿದ್ದು, ಇಬ್ಬರು ಮಕ್ಕಳಿದ್ದಾರೆ.
ಮೇ 21 ರಂದು, ಬೆಂಗಳೂರಿನ ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಹರಿದ ನೀಲಿ ಬಣ್ಣದ ಸೂಟ್‌ಕೇಸ್ ಪತ್ತೆಯಾಗಿತ್ತು ಅದನ್ನು ತೆರೆದು ನೋಡಿದಾಗ ಅದರಲ್ಲಿ 17 ವರ್ಷದ ಹುಡುಗಿಯ ಶವ ಕಂಡು ಬೆಚ್ಚಿಬಿದ್ದ ಜನ ಪೊಲೀಸರಿಗೆ ದೂರು ನೀಡಿದ್ದರು.