ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡು ಅಂತಸ್ತಿನ ಕಟ್ಟಡದಲ್ಲಿ ಶನಿವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಬೆಂಕಿಯ ಜ್ವಾಲೆ ಸಂಪೂರ್ಣ ಕಟ್ಟಡವನ್ನು ಆವರಿಸಿದೆ. ಈ ದುರಂತದಲ್ಲಿ ಏಳು ಜನ ಸಜೀವ ದಹನವಾದ ಘಟನೆ ಇಂದೋರ್‌ನ ಸ್ವರ್ಣ ಬಾಗ್ ಕಾಲೋನಿಯಲ್ಲಿ ನಡೆದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಮನೆಯೊಳಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಇಂದೋರ್ ಪೊಲೀಸ್ ಕಮಿಷನರ್ ಹರಿನಾರಾಯಣ ಚಾರಿ ಮಿಶ್ರಾ ತಿಳಿಸಿದ್ದಾರೆ.
ಏಳು ಮಂದಿ ಸಾವನ್ನಪ್ಪಿದ್ದು, ಕಟ್ಟಡದಲ್ಲಿದ್ದ ಒಂಭತ್ತು ಮಂದಿಯನ್ನು ಅಧಿಕಾರಿಗಳು ರಕ್ಷಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಧಗಧಗ ಉರಿಯುತ್ತಿರುವ ಬಂಕಿ ನಂದಿಸಲು ಮೂರು ಗಂಟೆ ಸಮಯ ತೆಗೆದುಕೊಂಡಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.