7 ಕೋಟಿ ರೂ. ವೆಚ್ಚದಲ್ಲಿ ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ಧಿ: ಡಾ. ಯತೀಂದ್ರ ಸಿದ್ದರಾಮಯ್ಯ

ಹೊಸದಿಗಂತ ವರದಿ,ಮೈಸೂರು:

ವರುಣಾ ಕ್ಷೇತ್ರದ ಮೈಸೂರು ತಾಲ್ಲೂಕು ವ್ಯಾಪ್ತಿಯ ಸರ್ಕಾರಿ ಶಾಲೆಗಳ ಅಭಿವೃದ್ಧಿಯನ್ನು ೭ ಕೋಟಿ ರೂ. ವೆಚ್ಚದಲ್ಲಿ ಸಿ.ಎಸ್.ಆರ್. ಫಂಡ್‌ನಿoದ ಮಾಡಲಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ವರುಣ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಯುನೈಟೆಡ್‌ವೇ ವತಿಯಿಂದ ನಿರ್ಮಿಸುತ್ತಿರುವ ಶಾಲಾ ಕಟ್ಟಡಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ವರುಣ ವರುಕೋಡು, ದೇವಲಾಪುರ, ಹಡಜನ, ಸೋಮೇಶ್ವರಪುರ, ಹಾರೋಹಳ್ಳಿ, ಯಡಕೊಳ, ಮೊಸಂಬಾಯನಹಳ್ಳಿ, ಸಿದ್ದರಾಮನಹುಂಡಿ, ಜಂತಗಳ್ಳಿ ಗ್ರಾಮಗಳಲ್ಲಿ ಸಿ.ಎಸ್.ಆರ್. ಫಂಡ್‌ನಿoದ ನೂತನ ಕಟ್ಟಡಗಳು, ಶೌಚಾಲಯ, ಕಾಂಪೌoಡ್, ಮೈದಾನ ಹೀಗೆ ಶಾಲೆಗಳ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ವಿಶೇಷವಾಗಿ ವರುಣಾ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಕ್ಷೇತ್ರವಾಗಿದ್ದು, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸಲಾಗುತ್ತಿದೆ. ಇದಲ್ಲದೆ ೩೦ ಅಂಗನವಾಡಿ ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿದ್ದೇವೆ. ಗುಣಮಟ್ಟದ ಶಿಕ್ಷಣ ಪ್ರತಿಯೊಬ್ಬರಿಗೂ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಅಂಗನವಾಡಿಗಳಲ್ಲಿ ಮಕ್ಕಳಿಗೆ ಇಂಗ್ಲೀಷ್ ಕಲಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಕೆ.ಎನ್. ವಿಜಯ್, ಕೆಪಿಸಿಸಿ ಕಾರ್ಯದರ್ಶಿ ವರುಣಾ ಮಹೇಶ್, ಗ್ರಾ.ಪಂ. ಅಧ್ಯಕ್ಷ ಗೌರಮ್ಮ, ಬಿಇಒ ವಿವೇಕಾನಂದ, ಬಿಆರ್‌ಸಿ ಮಹಾದೇವ, ಯುನೈಟೆಡ್ ವೇನ ಸಿಇಓ ರಾಜೇಶ್ ಕೃಷ್ಣನ್, ಭಾಗ್ಯ, ಮುಖಂಡರಾದ ರಮೇಶ್ ಮುದ್ದೇಗೌಡ, ದೇವಯ್ಯ, ಮಹೇಂದ್ರ, ಮಂಜುಳ ಮಂಜುನಾಥ್, ಮಡೆ ಶಿವರಾಂ, ಅಹಿಂದ ಜವರಪ್ಪ, ಕೃಷ್ಣಮೂರ್ತಿ, ಆಪ್ತ ಸಹಾಯಕ ಶಿವಸ್ವಾಮಿ, ಪ್ರದೀಪ್‌ಕುಮಾರ್, ನಾಗರಾಜ್ ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!