ಇರಾನ್‌ನಲ್ಲಿ ಭೂಕಂಪನಕ್ಕೆ ಜನ ತತ್ತರ: 7ಜನರ ಸಾವು, 440ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇರಾನ್ ನಲ್ಲಿ ಭಾರೀ ಭೂಕಂಪ ಸಂಭವಿಸಿದ್ದು, ಹಲವು ಪ್ರದೇಶಗಳಲ್ಲಿ ಕಟ್ಟಡಗಳು ಕುಸಿದಿವೆ. ದುರಂತದಲ್ಲಿ ಏಳು ಜನರು ಸಾವನ್ನಪ್ಪಿದ್ದು, ಮತ್ತು 440 ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.9 ರಷ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪದಿಂದಾಗಿ ಖೋಯ್ ಮತ್ತು ಅಜರ್ ಬೈಜಾನ್ ಪ್ರಾಂತ್ಯದಲ್ಲಿ ಕಟ್ಟಡಗಳು ಕುಸಿದಿವೆ. ಆ ಪ್ರದೇಶಗಳಲ್ಲಿ, ಸಹಾಯಕ ತಂಡಗಳು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗಳಿಗೆ ಸ್ಥಳಾಂತರಿಸುತ್ತಿವೆ. ಇರಾನ್‌ನ ತುರ್ತು ಸೇವಾ ವಿಭಾಗದ ಅಧಿಕಾರಿಗಳು ಅವರು ಆಸ್ಪತ್ರೆಗಳಿಗೆ ಮಾಹಿತಿ ನೀಡಿ ಮತ್ತು ಎಲ್ಲಾ ವ್ಯವಸ್ಥೆಗಳನ್ನು ಮುಂಚಿತವಾಗಿ ಮಾಡುವಂತೆ ಹೇಳಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಭೂಕಂಪ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ. ಆ ಪ್ರದೇಶಗಳಲ್ಲಿ ದಟ್ಟ ಮಂಜು ಕವಿದಿದ್ದು, ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗಳಿಗೆ ಕರೆದೊಯ್ಯುತ್ತಿದ್ದಾರೆ ಎಂದು ವಿವರಿಸಿದರು. ಎಲ್ಲಾ ತುರ್ತು ಸೇವಾ ವಿಭಾಗಗಳ ನಿಯಂತ್ರಣವನ್ನು ಸರ್ಕಾರ ಮುಕ್ತಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!