Sunday, December 10, 2023

Latest Posts

ಅಫ್ಘಾನಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ: 7 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಫ್ಘಾನಿಸ್ತಾನದ ಮಸೀದಿಯೊಂದರಲ್ಲಿ ಆತ್ಮಹತ್ಯಾ ದಾಳಿ ಸಂಭವಿಸಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ ಎಂದು ತಾಲಿಬಾನ್‌ ಸರ್ಕಾರ ಹೇಳಿದೆ.

ಬಾಗ್ಲಾನ್ ಪ್ರಾಂತ್ಯದ ಮಧ್ಯದಲ್ಲಿರುವ ಪೋಲ್-ಇ-ಖೋಮ್ರಿಯ ತಕಿಯಾಖಾನಾ ಇಮಾಮ್ ಜಮಾನ್‌ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ.

ಪ್ರಾರ್ಥನೆ ಸಲ್ಲಿಸುವ ವೇಳೆ ಈ ದುರಂತ ನಡೆದಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ ಮತ್ತು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಫ್ಘಾನಿಸ್ತಾನವನ್ನು ಬೆಚ್ಚಿಬೀಳಿಸಿದ ಮತ್ತೊಂದು ಸ್ಫೋಟ ಇದಾಗಿದೆ.

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭದ್ರತೆ ಮತ್ತು ತನಿಖಾ ಪಡೆಗಳು ಭೇಟಿ ನೀಡಿ ಪರಿಶೀಲನೆ ನಡೆದಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!