Monday, September 26, 2022

Latest Posts

ನಿಂತಿದ್ದ ಟ್ರಕ್‌ಗೆ ಡಿಕ್ಕಿಯಾದ ಬಸ್:‌ 7 ಪ್ರಯಾಣಿಕರು ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು ಏಳು ಜನರು ಸಾವನ್ನಪ್ಪಿ ಮೂವರು ಗಾಯಗೊಂಡ ದಾರುಣ ಘಟನೆ ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಖಾಸಗಿ ಟ್ರಾವೆಲ್ ಕಂಪನಿಗೆ ಸೇರಿದ ಬಸ್ ರಾಜ್ಯ ರಾಜಧಾನಿ ರಾಯ್‌ಪುರದಿಂದ ಸುರ್ಗುಜಾ ಜಿಲ್ಲೆಗೆ ತೆರಳುತ್ತಿದ್ದಾಗ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬಂಗೋ ಪೊಲೀಸ್ ಠಾಣೆ ವ್ಯಾಪ್ತಿಯ ಮದಾಯಿ ಘಾಟ್ ಬಳಿ ಅಪಘಾತ ಸಂಭವಿಸಿದೆ ಎಂದು ಕೊರ್ಬಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್ ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ ಚಾಲಕ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಬಸ್ ಪಕ್ಕದಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಏಳು ಮಂದಿ ಬಸ್‌ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಾಯಗಳಾಗಿವೆ ಎಂದು ಅವರು ತಿಳಿಸಿದ್ದಾರೆ. ಗಾಯಾಳುಗಳನ್ನು ಇಲ್ಲಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಿದರು. ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!