SHOCKING| ಪ್ರಯಾಣಿಕರಿದ್ದ ಬಸ್‌ನಲ್ಲಿ ಸ್ಫೋಟ, ಏಳು ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಯಾಣಕರಿದ್ದ ಬಸ್‌ನಲ್ಲಿ ಸ್ಪೋಟ ಸಂಭವಿಸಿ, ಏಳು ಮಂದಿ ಸಾವನ್ನಪ್ಪಿರುವ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ. ರಾಜಧಾನಿ ಕಾಬೂಲ್‌ನಲ್ಲಿ ಮಂಗಳವಾರ ಈ ಘಟನೆ ಜರುಗಿದ್ದು, 20ಮಂದಿ ಗಾಯಗೊಂಡಿದ್ದಾರೆ. ಅಲ್ಪಸಂಖ್ಯಾತ ಶಿಯಾ ಸಮುದಾಯಗಳು ಹೆಚ್ಚು ಜನಸಂಖ್ಯೆ ಹೊಂದಿರುವ ದಶ್ತ್-ಎ-ಬರ್ಚಿ ನೆರೆಹೊರೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಖಾಲಿದ್ ಜದ್ರಾನ್ ಹೇಳಿದ್ದಾರೆ.

ಯಾವುದೇ ಭಯೋತ್ಪಾದನಾ ಸಂಘಟನೆ ಸ್ಫೋಟದ ಹೊಣೆಯನ್ನು ಹೊತ್ತುಕೊಡಿಲ್ಲ. ಮಾಹಿತಿ ಸಿಕ್ಕ ತಕ್ಷಣ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿವೆ. ಅಕ್ಟೋಬರ್ ತಿಂಗಳಿನಲ್ಲಿ ಇದೇ ಪ್ರದೇಶದ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿತ್ತು. ಈ ದಾಳಿಯನ್ನು ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರು ನಡೆಸಿದ್ದರು. ಈ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದರು.

2021 ರಲ್ಲಿ, ತಾಲಿಬಾನ್ ನಾಗರಿಕ ಸರ್ಕಾರವನ್ನು ಉರುಳಿಸಿ ಅಧಿಕಾರವನ್ನು ವಶಪಡಿಸಿಕೊಂಡಿತು. ಅಂದಿನಿಂದ, ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರು ಅಫ್ಘಾನಿಸ್ತಾನದಲ್ಲಿ ಅಲ್ಪಸಂಖ್ಯಾತ ಹಜಾರಾ ಮತ್ತು ಶಿಯಾ ಸಮುದಾಯಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಹಲವು ಸಂದರ್ಭಗಳಲ್ಲಿ ಮಸೀದಿಗಳಲ್ಲಿ ಆತ್ಮಹತ್ಯಾ ದಾಳಿಗಳು ನಡೆಯುತ್ತವೆ. ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರು ತಾಲಿಬಾನ್ ಗೆ ತಲೆನೋವಾಗಿ ಪರಿಣಮಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!